Homeಅಂತರಾಷ್ಟ್ರೀಯ10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ಹೊಸ ಅಂದಾಜಿನ ಪ್ರಕಾರ ಈಗ 703 ರಿಂದ 729 ಮಿಲಿಯನ್ ಜನರು ತೀವ್ರ ಬಡತನದಲ್ಲಿದ್ದಾರೆ. ಅವರು ದಿನಕ್ಕೆ $1.90 ಕ್ಕಿಂತ ಕಡಿಮೆ ಹಣದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.

- Advertisement -
- Advertisement -

ಕೊರೊನಾ ಕಾರಣದಿಂದಾಗಿ 2000ರ ನಂತರ ಮೊದಲ ಬಾರಿಗೆ, ತೀವ್ರ ಜಾಗತಿಕ ಬಡತನದಲ್ಲಿ ಏರಿಕೆ ಕಂಡುಬರಲಿದೆ. ಕೊರೊನಾ ಸಾಂಕ್ರಾಮಿಕ ರೋಗವು ಈಗಾಗಲೇ 88 ರಿಂದ 114 ದಶಲಕ್ಷ ಜನರನ್ನು ತೀವ್ರ ಬಡತನಕ್ಕೆ ದೂಡಿದ್ದು, 2020ರ ಅಂತ್ಯದ ವೇಳೆಗೆ 150 ದಶಲಕ್ಷ ಜನರನ್ನು ತೀವ್ರ ಬಡತನಕ್ಕೆ ತಳ್ಳಬಹುದು ಎಂದು ವಿಶ್ವಬ್ಯಾಂಕ್ ವರದಿ ಮಾಡಿದೆ.

ವಿಶ್ವ ಬ್ಯಾಂಕಿನ ಅಂದಾಜುಗಳು ಈ ಹಿಂದೆ ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಭೀಕರ ಪರಿಸ್ಥಿತಿಯನ್ನು ತೋರಿಸುತ್ತವೆ. ಉದಾಹರಣೆಗೆ, ಸಾಂಕ್ರಾಮಿಕ ರೋಗದಿಂದಾಗಿ 37 ಮಿಲಿಯನ್ ಜನರು ತೀವ್ರ ಬಡತನಕ್ಕೆ ಒಳಗಾಗಿದ್ದಾರೆ ಎಂದು ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್ ವರದಿ ಮಾಡಿತ್ತು.

ಹೊಸ ಅಂದಾಜಿನ ಪ್ರಕಾರ ಈಗ 703 ರಿಂದ 729 ಮಿಲಿಯನ್ ಜನರು ತೀವ್ರ ಬಡತನದಲ್ಲಿದ್ದಾರೆ. ಅವರು ದಿನಕ್ಕೆ $1.90 ಕ್ಕಿಂತ ಕಡಿಮೆ ಹಣದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ. ಜೊತೆಗೆ 2021ರಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ 12.2 ಕೋಟಿ ಉದ್ಯೋಗ ನಷ್ಟ, 4.9 ಕೋಟಿ ಜನ ಬಡತನದಲ್ಲಿ

1998 ರಲ್ಲಿ ಏಷ್ಯಾದ ಆರ್ಥಿಕ ಬಿಕ್ಕಟ್ಟು ಹತ್ತಾರು ದಶಲಕ್ಷ ಜನರನ್ನು ತೀವ್ರ ಬಡತನಕ್ಕೆ ದೂಡಿತ್ತು. 2008 ರ ಆರ್ಥಿಕ ಬಿಕ್ಕಟ್ಟು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಸಮಯದಲ್ಲಿಯೂ ಸಹ, ಭಾರತ ಮತ್ತು ಚೀನಾದ ಉದಯೋನ್ಮುಖ ಮಾರುಕಟ್ಟೆಗಳ ನಿರಂತರ ಬೆಳವಣಿಗೆಯಿಂದಾಗಿ ತೀವ್ರ ಬಡತನದಲ್ಲಿರುವವರ ಸಂಖ್ಯೆ ಕುಸಿದಿತ್ತು.


ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...