Homeಕರೋನಾ ತಲ್ಲಣಭಾರತದಲ್ಲಿ ಆಕ್ಸ್‌‌ಫರ್ಡ್ ಕೊರೊನಾ ಲಸಿಕೆಯ ಬೆಲೆ 225 ರೂ!: ಎಸ್‌ಐಐ

ಭಾರತದಲ್ಲಿ ಆಕ್ಸ್‌‌ಫರ್ಡ್ ಕೊರೊನಾ ಲಸಿಕೆಯ ಬೆಲೆ 225 ರೂ!: ಎಸ್‌ಐಐ

- Advertisement -
- Advertisement -

ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಕೊರೊನಾ ಲಸಿಕೆಯ ಉತ್ಪಾದನಾ ಪಾಲುದಾರಿಕೆಯನ್ನು ಹೊಂದಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಭಾರತ ಸೇರಿದಂತೆ ಸಣ್ಣ ಮತ್ತು ಮಧ್ಯಮ ಆದಾಯದ ದೇಶಗಳಿಗೆ 3 ಡಾಲರ್‌ ಅಥವಾ 225 ರೂಪಾಯಿ ದರದಲ್ಲಿ ಲಭ್ಯವಾಗುವಂತೆ ಮಾಡುತ್ತೇವೆ ಎಂದಿದ್ದಾರೆ.

ಅಸ್ಟ್ರಾಜೆನೆಕಾ ಪರವಾನಿಗೆ ಹೊಂದಿರುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆಯು ಭಾರತ ಮತ್ತು ಇತರ ಹಲವಾರು ದೇಶಗಳಲ್ಲಿ ಕ್ಲಿನಿಕಲ್ ಪ್ರಯೋಗಗಳ ಹಂತದಲ್ಲಿದೆ. ಇದು 2021 ರ ಮೊದಲಾರ್ಧದಲ್ಲಿ ಸಾರ್ವಜನಿಕ ಬಳಕೆಗೆ ಲಭ್ಯವಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಈ ಪ್ರಾಯೋಗಿಕ ಲಸಿಕೆಯ ಆರಂಭಿಕ ಹಂತದ ಮಾನವ ಪ್ರಯೋಗಗಳು ಉತ್ತಮ ಫಲಿತಾಂಶಗಳನ್ನು ತೋರಿಸುತ್ತಿದೆ ಎನ್ನಲಾಗಿದೆ.

ಈ ತಿಂಗಳ ಆರಂಭದಲ್ಲಿ ನೊವಾವಾಕ್ಸ್ ತನ್ನ ಲಸಿಕೆಯನ್ನು ಸಾಮಾನ್ಯವಾಗಿ ಚೆನ್ನಾಗಿದ್ದು,  ಹಂತ 1 ಮತ್ತು ಹಂತ 2ರ ಪ್ರಯೋಗಗಳಲ್ಲಿ ದೃಢವಾದ ಪ್ರತಿಕಾಯ (ಆಂಟಿಬಾಡಿ) ಪ್ರತಿಕ್ರಿಯೆಗಳನ್ನು ಪ್ರಚೋದಿಸಿತು ಎಂದು ಘೋಷಿಸಿದೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಾಗಿರುವ ’ಎಸ್‌ಐಐ’, ಗವಿ, ಲಸಿಕೆ ಒಕ್ಕೂಟ ಮತ್ತು ಬಿಲ್ & ಮಿಲಿಂದಾ ಗೇಟ್ಸ್ ಫೌಂಡೇಶನ್‌ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದು, ಭಾರತ ಸೇರಿದಂತೆ ಸಣ್ಣ ಮತ್ತು ಮಧ್ಯಮ ಆದಾಯದ ದೇಶಗಳಿಗೆ 100 ಮಿಲಿಯನ್ ಡೋಸ್ ಕೊರೊನಾ ಲಸಿಕೆಗಳನ್ನು ತಲುಪಿಸುವ ಗುರಿ ಹೊಂದಿದೆ.

“ವೈರಸ್‌ ಹರಡುವಿಕೆಯು ಇಡೀ ಜಗತ್ತನ್ನು ಊಹಿಸಲಾಗದ ಅನಿಶ್ಚಿತತೆಗೆ ದೂಡಿದೆ. ಹಾಗಾಗಿ ಗರಿಷ್ಠ ರೋಗನಿರೋಧಕ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಸಾಂಕ್ರಾಮಿಕದಿಂದ ಬಳಲುತ್ತಿರುವ ವಿಶ್ವದ ಅತ್ಯಂತ ದೂರದ, ಬಡ ದೇಶಗಳಿಗೂ ಸಹ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರಕುವಂತೆ ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ” ಎಂದು ’ಎಸ್‌ಐಐ’ ಮುಖ್ಯಸ್ಥ ಆದರ್ ಪೂನವಾಲಾ ಹೇಳಿದ್ದಾರೆ.


ಓದಿ: ಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಪ್ರಯೋಗಕ್ಕೆ ಅನುಮತಿ: SII


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...