Homeಕರೋನಾ ತಲ್ಲಣಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ಶಾಲೆಗಳು ತೆರೆಯದಿದ್ದರೆ ಬುಡಕಟ್ಟು ಮತ್ತು ಗ್ರಾಮೀಣ ಪ್ರದೇಶದ ಬಾಲಕಿಯರು ಬಾಲ್ಯ ವಿವಾಹಕ್ಕೆ ಬಲಿಯಾಗುವ ಆತಂಕವನ್ನು ಇಲಾಖೆ ಅಧಿಕಾರಿ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ನಂತರ ಶಾಲೆಗಳನ್ನು ತೆರೆಯಲು ರಾಜ್ಯಗಳು ಸಭೆಗಳ ಮೇಲೆ ಸಭೆ ನಡೆಸುತ್ತಿವೆ. ಗೊಂದಲದ ಹೇಳಿಕೆಗಳು ಬರುತ್ತಿವೆ. ಇವುಗಳ ನಡುವೆ ನವೆಂಬರ್ 2 ರಂದು ಶಾಲೆಗಳನ್ನು ಪುನರಾರಂಭಿಸಿದ ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸಿದ ಮೂರು ದಿನಗಳಲ್ಲೇ ಆಂಧ್ರ ಪ್ರದೇಶದಲ್ಲಿ 262 ವಿದ್ಯಾರ್ಥಿಗಳು ಮತ್ತು ಸುಮಾರು 160 ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಆಯುಕ್ತ ವಿ. ಚಿನ್ನಾ ವೀರಭದ್ರುಡು ಮಾತನಾಡಿ, “ಶಾಲೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಸಿದರೆ ಈ ಅಂಕಿ ಅಂಶವು ಆತಂಕಕಾರಿಯಲ್ಲ, ಆದರೆ ಪ್ರತಿ ಸಂಸ್ಥೆಯಲ್ಲಿ ಕೊರೊನಾ ಸುರಕ್ಷತಾ ಕ್ರಮ‌ಗಳು ಜಾರಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ಕಾಳಜಿ ವಹಿಸಲಾಗುತ್ತಿದೆ” ಎಂದಿದ್ದಾರೆ.

“ನಿನ್ನೆ (ನವೆಂಬರ್ 4) ಸುಮಾರು ನಾಲ್ಕು ಲಕ್ಷ ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಿದ್ದಾರೆ. 262 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಮಕ್ಕಳ ಸಂಖ್ಯೆಗೆ ಹೋಲಿಸಿದರೆ ಇದು ಶೇಕಡಾ 0.1 ಕೂಡ ಅಲ್ಲ. ಶಾಲೆಗಳಿಗೆ ಹಾಜರಾಗಿದ್ದರಿಂದ ಅವುಗಳು ಪರಿಣಾಮ ಬೀರಿವೆ ಎಂದು ಹೇಳುವುದು ಸರಿಯಲ್ಲ. ಪ್ರತಿ ಶಾಲಾ ಕೊಠಡಿಯಲ್ಲಿ ಕೇವಲ 15 ಅಥವಾ 16 ವಿದ್ಯಾರ್ಥಿಗಳು ಮಾತ್ರ ಇರುತ್ತಾರೆ”ಎಂದು ಚಿನ್ನಾ ವೀರಭದ್ರುಡು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

“ರಾಜ್ಯದಲ್ಲಿ 9 ಮತ್ತು 10 ನೇ ತರಗತಿಗೆ 9.75 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ, ಅದರಲ್ಲಿ 3.93 ಲಕ್ಷ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದಾರೆ. 1.11 ಲಕ್ಷ ಶಿಕ್ಷಕರಲ್ಲಿ, 99,000 ಸಾವಿರಕ್ಕೂ ಹೆಚ್ಚು ಮಂದಿ ಶಿಕ್ಷಣ ಸಂಸ್ಥೆಗಳಿಗೆ ಬುಧವಾರ ಹಾಜರಾಗಿದ್ದಾರೆ. ಅವರಲ್ಲಿ ಸುಮಾರು 160 ಶಿಕ್ಷಕರಿಗೆ ಸೋಂಕು ಬಂದಿದೆ. ವಿದ್ಯಾರ್ಥಿಗಳಲ್ಲದೆ ಶಿಕ್ಷಕರ ಜೀವವೂ ನಮಗೆ ಮುಖ್ಯವಾಗಿದೆ” ಎಂದು ವೀರಭದ್ರುಡು ತಿಳಿಸಿದ್ದಾರೆ.

‘ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿನ ಬಗ್ಗೆ ಹೆದರಿಕೆ ಇರುವುದರಿಂದ, ಶಾಲೆಯಲ್ಲಿ ಮಕ್ಕಳ ಹಾಜರಾತಿ ಶೇಕಡಾ 40ರಷ್ಟಿದೆ’ ಎಂದು ವೀರಭದ್ರುಡು ತಿಳಿಸಿದರು.

ಶಾಲೆಗಳು ತೆರೆಯದಿದ್ದರೆ ಆನ್‌ಲೈನ್ ತರಗತಿಗಳನ್ನು ಪಡೆಯಲು ಸಾಧ್ಯವಾಗದ ಬಡ ವಿದ್ಯಾರ್ಥಿಗಳ ಮೇಲೆ ಇದು ಹೆಚ್ಚು ಪರಿಣಾಮ ಬೀರುತ್ತದೆ. ಬುಡಕಟ್ಟು ಮತ್ತು ಗ್ರಾಮೀಣ ಪ್ರದೇಶದ ಬಾಲಕಿಯರಿಗೆ ದೊಡ್ಡ ತೊಂದರೆಯಾಗಿದೆ, ಏಕೆಂದರೆ ಹದಿಹರೆಯದವರು ಶಾಲೆಗಳಿಗೆ ಹೋಗುವುದನ್ನು ನಿಲ್ಲಿಸಿದರೆ ಪೋಷಕರು ಬಾಲ್ಯ ವಿವಾಹ ಮಾಡಬಹುದು ಅಧಿಕಾರಿ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read