Homeಮುಖಪುಟಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯಬೇಕೆಂಬ ಒತ್ತಾಯಕ್ಕೆ ಹಿನ್ನಡೆ

- Advertisement -
- Advertisement -

ಹತ್ರಾಸ್‌ನ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ನಡೆಯುತ್ತಿರುವ ತನಿಖೆಯನ್ನು ಮೇಲ್ವಿಚಾರಣೆ ಮಾಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂಕೋರ್ಟ್‌ನಲ್ಲಿ ಮೇಲ್ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತೆ ಸತ್ಯಮಾ ದುಬೆ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಹಿನ್ನೆಲೆ ಈ ಆದೇಶ ನೀಡಲಾಗಿದೆ.

ಹತ್ರಾಸ್ ಪ್ರಕರಣದ ತನಿಖೆಯ ಎಲ್ಲಾ ಅಂಶಗಳನ್ನು ಅಲಹಾಬಾದ್ ಹೈಕೋರ್ಟ್ ಪರಿಶೀಲಿಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಪ್ರಸ್ತುತ, ಈ ಪ್ರಕರಣವು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನಲ್ಲಿದ್ದು, ತನಿಖಾ ಸ್ಥಿತಿಗತಿಗಳ ವರದಿಯೊಂದಿಗೆ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದಿದೆ.

ಸಿಜೆಐ ಎಸ್‌.ಎ.ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆ ಮಾಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ. ಸಂತ್ರಸ್ತ ಮೃತ ಯುವತಿಯ “ಅವಸರದ ಶವಸಂಸ್ಕಾರ” ದ ಕುರಿತು ಅಲಹಾಬಾದ್ ನ್ಯಾಯಾಲಯದಲ್ಲಿ ಸುಮೋಟೋ ಪ್ರಕರಣವನ್ನು ಪರಿಶಿಲಿಸುತ್ತಿರುವುದರಿಂದ ಈ ಮೇಲ್ವಿಚಾರಣೆಯನ್ನು ಅಲ್ಲಿಗೆ ವಹಿಸಲಾಗಿದೆ.

ಇದನ್ನೂ ಓದಿ: ಹತ್ರಾಸ್ ಕೇಸ್: ಅ.29ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

ವಕೀಲೇ, ಸಾಮಾಜಿಕ ಕಾರ್ಯಕರ್ತೆ ಇಂದಿರಾ ಜೈಸಿಂಗ್ ಸೇರಿದಂತೆ ಹಲವಾರು ವಕೀಲರು ಉತ್ತರಪ್ರದೇಶದಲ್ಲಿ ಹತ್ರಾಸ್ ಪ್ರಕರಣದ ನ್ಯಾಯಯುತ ತನಿಖೆ ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದರು. ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಪ್ರಕರಣ ಸಂಬಂಧ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ, ಮೃತ ಸಂತ್ರಸ್ತೆಯ ಅಂತ್ಯಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಕೇಳಿತ್ತು. ಉತ್ತರ ಪ್ರದೇಶದ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ಕ್ರಮವನ್ನು ಕಟುವಾಗಿ ಟೀಕಿಸಿತ್ತು. ಅವಸರದ ಅಂತ್ಯಸಂಸ್ಕಾರಕ್ಕೆ ಬೇಸರ ವ್ಯಕ್ತಪಡಿಸಿತ್ತು.

ಹತ್ರಾಸ್ ಪ್ರಕರಣ ಕುರಿತು ಅ.29ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳು ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ.

ಅಖಿಲ ಭಾರತ ಪ್ರಜಾಸತ್ಮಾತ್ಮಕ ಮಹಿಳಾ ಸಂಘ, ರಾಷ್ಟ್ರೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ, ಪ್ರಗತಿಶೀತ್ ಮಹಿಳಾ ಸಂಘಟನೆ ಮತ್ತು ಇತರ ಸಂಘ ಸಂಸ್ಥೆಗಳು, ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.


ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...