Homeಮುಖಪುಟಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ಕಂಗನಾ ರಾಣಾವತ್ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ತಾನೇ ಎಫ್‌ಐಆರ್ ದಾಖಲಾಗಿದೆ.

- Advertisement -
- Advertisement -

ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ FIR ದಾಖಲಿಸಲು ಮುಂಬೈ ಕೋರ್ಟ್ ಆದೇಶಿಸಿದೆ.

ಕಂಗಾನಾ ರಾಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್‌ರವರು ಟ್ವೀಟ್‌ಗಳು ಮತ್ತು ಸಂದರ್ಶನಗಳ ಮೂಲಕ ಕೋಮು ಉದ್ವೇಗವನ್ನು ಉಂಟುಮಾಡುತ್ತಿದ್ದಾರೆ ಎಂಬ ಅರ್ಜಿಯನ್ನು ಆಲಿಸಿದ ಮುಂಬೈನ ಬಾಂಧ್ರಾ ನ್ಯಾಯಾಲಯವು FIR ದಾಖಲಿಸಲು ಮುಂಬೈ ಪೊಲೀಸರಿಗೆ ಸೂಚಿಸಿದೆ.

ವಿವಾದಿತ ರೈತ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ತಾನೇ ಎಫ್‌ಐಆರ್ ದಾಖಲಾಗಿದೆ.

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಾಣಾವತ್ ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿ ಕಳೆದ ವಾರ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ಎಫ್‌ಐಆರ್‌ ದಾಖಲಿಸಲು ನಿರ್ದೇಶನ ನೀಡಿದ್ದರು.


ಇದನ್ನೂ ಓದಿ: ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ರಾಣಾವತ್ ವಿರುದ್ಧ FIR ದಾಖಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...