Homeಮುಖಪುಟಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು

- Advertisement -
- Advertisement -

ಅಮಿತಾಬ್ ಬಚ್ಚನ್ ಅಭಿನಯದ ‘ಝುಂಡ್’ ಚಲನಚಿತ್ರ ಬಿಡುಗಡೆಯ ಮೇಲಿನ ತಡೆಯಾಜ್ಞೆಯನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಚಿತ್ರದ ಬಿಡುಗಡೆಯನ್ನು ತಡೆಹಿಡಿಯುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.

ಚಲನಚಿತ್ರ ತಡೆಗೆ ಸಂಬಂಧಿಸಿದಂತೆ ಅಕ್ಟೋಬರ್ 19 ರಂದು ತೆಲಂಗಾಣ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸೂಪರ್ ಕ್ಯಾಸೆಟ್ಸ್ ಇಂಡಸ್ಟ್ರೀಸ್ (ಟಿ ಸೀರಿಸ್) ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ವಜಾಗೊಳಿಸಿದೆ.

ಸ್ಲಮ್ ಸಾಕರ್ (ಫುಟ್‌ಬಾಲ್) ಎನ್‌ಜಿಒ ಸಂಸ್ಥಾಪಕ ವಿಜಯ್ ಬಾರ್ಸೆ ಅವರ ಜೀವನವನ್ನು ಆಧರಿಸಿದ ಈ ಚಿತ್ರವನ್ನು ಇದೇ ತಿಂಗಳು ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇದನ್ನು ಈ ಮೊದಲು ಮೇ ತಿಂಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಅದು ತೆರೆಗೆ ಬರಲಿಲ್ಲ.

ಈ ಚಲನಚಿತ್ರ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಿದ್ದಾರೆ ಎಂದು ಹೈದರಾಬಾದ್ ಮೂಲದ ಕಿರುಚಿತ್ರ ನಿರ್ಮಾಪಕ ನಂದಿ ಚಿನ್ನಿ ಕುಮಾರ್ ಆರೋಪಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ಇದು ಆಸಕ್ತಿದಾಯಕ ಪ್ರಕರಣವೆಂದು ಗಮನಿಸಿದ್ದು, ಆರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

“ಚಲನಚಿತ್ರ ತಯಾರಕರ ಪರ ಹಾಜರಾದ ವಕೀಲರು, ಆರು ತಿಂಗಳಲ್ಲಿ ಚಲನಚಿತ್ರವು ನಿಷ್ಪ್ರಯೋಜಕವಾಗಲಿದೆ. ದೂರು ಸಲ್ಲಿಸಿರುವ ವ್ಯಕ್ತಿಗೆ ಹಣ ಪಾವತಿಸುವುದಾಗಿಯೂ ಒಪ್ಪಿದ್ದೇವೆ. ಇಬ್ಬರ ನಡುವೆ 1.3 ಕೋಟಿ ರೂ.ಗಳ ಮೊತ್ತದ ಒಪ್ಪಂದವಾಗಿದೆ. ಆದರೆ ಈಗ ಅವರು ಒಪ್ಪಂದಕ್ಕೆ ಬದ್ಧರಾಗಿಲ್ಲ” ಎಂದು ಹೇಳಿದರು.

“ಉತ್ಪಾದನೆ, ವಿತರಣೆ, ಮಾರುಕಟ್ಟೆ ಮತ್ತು ಪ್ರಚಾರದಲ್ಲಿ ತಾವು ಗಣನೀಯ ಮೊತ್ತವನ್ನು ಹೂಡಿಕೆ ಮಾಡಿದ್ದೇವೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಮಾಣದಲ್ಲಿ ಪ್ರಸಾರವಾಗಲಿರುವ ಈ ಚಿತ್ರದ ಬಗ್ಗೆ ತೃತೀಯ ವ್ಯಕ್ತಿಯ ಹಕ್ಕು ಸ್ವಾಮ್ಯಗಳನ್ನೂ ಸಹ ಸೃಷ್ಟಿಸಿದ್ದೇವೆ. ಈಗ ಚಿತ್ರ ಬಿಡುಗಡೆಯಾಗಿಲ್ಲ ಎಂದರೆ ನಿರ್ಮಾಪಕರಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ” ಎಂದು ಟಿ ಸೀರೀಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ

0
2014 ಮತ್ತು, 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ...