Homeಮುಖಪುಟಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

20 ದಿನಗಳಲ್ಲಿ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದ ಮೂರನೇ ಅತ್ಯಾಚಾರ ಕೊಲೆ ಇದಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಗುರುವಾರ ಬೆಳಿಗ್ಗೆ, ಮೂರು ವರ್ಷದ ಬಾಲಕಿಯೊಬ್ಬಳು ಹೊಲವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರದ ನಂತರ, ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

20 ದಿನಗಳಲ್ಲಿ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದ ಮೂರನೇ ಅತ್ಯಾಚಾರ ಕೊಲೆ ಇದಾಗಿದೆ.

ಬಾಲಕಿಯು ಬುಧವಾರದಿಂದ ಕಾಣೆಯಾಗಿದ್ದಳು. ನಂತರ ಆಕೆಯ ಮೃತ ದೇಹವು, ತಲೆಯಲ್ಲಿ ಗಾಯದ ಗುರುತುಗಳೊಂದಿಗೆ, ಮನೆಯಿಂದ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು


ನಿನ್ನೆ, ಪೊಲೀಸರು ಇದನ್ನು ಕೊಲೆ ಎಂದು ಕರೆದಿದ್ದರು. ಆದರೆ, ನಂತರದ ಶವಪರೀಕ್ಷೆಯಿಂದ ಲೈಂಗಿಕ ದೌರ್ಜನ್ಯ ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ, “ಲೆಖ್ರಾಮ್ ಎಂಬುವವನು ಹಳೆಯ ದ್ವೇಷದಿಂದ ತನ್ನ ಮಗಳನ್ನು ಅಪಹರಿಸಿ ಕೊಂದಿದ್ದಾನೆ” ಎಂದು ಆರೋಪಿಸಿದ್ದಾರೆ. ಆರೋಪಿ ವ್ಯಕ್ತಿಯನ್ನು ಹುಡುಕಲು ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಇಂತಹದ್ದೇ ಮತ್ತೊಂದು ಪ್ರಕರಣ, ವಿದ್ಯಾರ್ಥಿವೇತನ ಅರ್ಜಿಯನ್ನು ಭರ್ತಿ ಮಾಡಲು ಮನೆ ಬಿಟ್ಟು ತೆರಳಿದ್ದ 17 ವರ್ಷದ ಬಾಲಕಿ ತನ್ನ ಗ್ರಾಮದ ಹೊರಗೆ ಶವವಾಗಿ ಪತ್ತೆಯಾದ ನಂತರ ಲಖಿಂಪುರ ಖೇರಿ ಜಿಲ್ಲೆ ಸುದ್ದಿಯಲ್ಲಿತ್ತು. ಆಕೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಆಕೆಯ ದೇಹವು ತನ್ನ ಹಳ್ಳಿಯಿಂದ 200 ಮೀಟರ್ ದೂರದಲ್ಲಿರುವ ಕೊಳದ ಬಳಿ ಪತ್ತೆಯಾಗಿತ್ತು.

ಇದಕ್ಕೂ ಮುನ್ನ ಅದೇ ಜಿಲ್ಲೆಯ ಇನ್ನೊಂದು ಪ್ರಕರಣದಲ್ಲಿ, 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ,  ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಬಾಲಕಿ ಮಧ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದಳು. ಅವಳು ಮನೆಗೆ ಹಿಂತಿರುಗದಿದ್ದಾಗ, ಆಕೆಯ ಕುಟುಂಬವು ಅವಳನ್ನು ಹುಡುಕಲು ಪ್ರಾರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವಳು ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಸಾರ್ವಜನಿಕರು ಸೇರಿದಂತೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಯೋಗಿಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...