Homeಅಂತರಾಷ್ಟ್ರೀಯಪಾಕಿಸ್ತಾನ: ಮದರಸಾದಲ್ಲಿ ಬಾಂಬ್ ಸ್ಫೋಟ, ಮಕ್ಕಳು ಸೇರಿ 7 ಮಂದಿ ಸಾವು

ಪಾಕಿಸ್ತಾನ: ಮದರಸಾದಲ್ಲಿ ಬಾಂಬ್ ಸ್ಫೋಟ, ಮಕ್ಕಳು ಸೇರಿ 7 ಮಂದಿ ಸಾವು

- Advertisement -
- Advertisement -

ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದಲ್ಲಿ ಇಂದು ಬೆಳಗ್ಗೆ ಬಾಂಬ್ ಸ್ಪೋಟಗೊಂಡಿದ್ದು, ಮಕ್ಕಳು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳು ಶಿಕ್ಷಕರು ಹಾಗೂ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿದೆ.

“ಮದರಸಾದಲ್ಲಿ ಸ್ಫೋಟ ಸಂಭವಿಸಿದೆ, ಅಲ್ಲಿ ಅಪರಿಚಿತರು ಪ್ಲಾಸ್ಟಿಕ್ ಚೀಲದಲ್ಲಿ ಸ್ಫೋಟಕಗಳನ್ನು ಇಟ್ಟಿದ್ದಾರೆ” ಎಂದು ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್‌‌ಗೆ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದಾಗ ಮದರಸಾದಲ್ಲಿ ಕುರಾನ್‌ ಬೋಧನೆ ನಡೆಯುತ್ತಿತ್ತು. ತರಗತಿಯಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದರು. ಸದ್ಯಕ್ಕೆ ಈ ದಾಳಿಯ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ವಘಾರ್‌ ಅಸೀಮ್‌ ತಿಳಿಸಿದರು.

ಗಾಯಾಳುಗಳನ್ನು ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರೆಲ್ಲರೂ 20 ರಿಂದ 40 ವರ್ಷದೊಳಗಿನ ಪುರುಷರು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ನೈರುತ್ಯ ನಗರ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟದಿಂದ ಮೂರು ಮಂದಿ ಸಾವನ್ನಪ್ಪಿದ್ದರು.


ಇದನ್ನೂ ಓದಿ: ಪಾಕಿಸ್ತಾನ: ಕರಾಚಿಯ ಕಟ್ಟಡದಲ್ಲಿ ಸ್ಫೋಟ, 3 ಸಾವು, 15 ಮಂದಿಗೆ ಗಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read