Homeಕರ್ನಾಟಕಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಕೊರೊನಾ ಸೋಂಕಿತರಿಗೆ ಬೆಡ್‌ಗಳನ್ನು, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ.- ಎಚ್.ಡಿ..ಕುಮಾರಸ್ವಾಮಿ

- Advertisement -
- Advertisement -

ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನಾದರೂ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೆಟರ್‌ ವ್ಯವಸ್ಥೆ ಮಾಡುವಲ್ಲಿ ಸರ್ಕಾರರ ಸೋತಿದೆ. ಕನಿಷ್ಠ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ವ್ಯವಸ್ಥೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ
ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಗಂಗಾರಾಮ್ ಆಸ್ಪತ್ರೆ ಸ್ಥಿತಿ: 25 ಕೋವಿಡ್‌ ರೋಗಿಗಳ ಸಾವು, 60 ಜನರ ಪರಿಸ್ಥಿತಿ ಚಿಂತಾಜನಕ

ಚಿತಾಗಾರಗಳಲ್ಲಿ ಮೃತರ ಶವಸಂಸ್ಕಾರಕ್ಕೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದಿದ್ದಾರೆ.

’ಕೊರೊನಾ ಸೋಂಕಿತರಿಗೆ ಬೆಡ್‌ಗಳನ್ನು, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯ ಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯ ಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕನಿಷ್ಠ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ವ್ಯವಸ್ಥೆ ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗುರುವಾರ ಕಂದಾಯ ಸಚಿವ ಆರ್‌.ಅಶೋಕ್, ಕೊರೊನಾ ಸೋಂಕಿನಿಂದ ಮೃತ ಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಸಾಂಪ್ರದಾಯಿಕವಾಗ ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ಪಿಎ ಹಲ್ಲೆ ಪ್ರಕರಣ: ಸ್ವಾತಿ ಮುಖದ ಮೇಲೆ ಆಂತರಿಕ ಗಾಯ; ಹೇಳಿಕೆ ಪಡೆದ...

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ ಹಲ್ಲೆಗೆ ಒಳಗಾಗಿರುವ, ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮುಖದ ಮೇಲೆ ಆಂತರಿಕ ಗಾಯಗಳಾಗಿರುವುದು ವೈದ್ಯಕೀಯ...