Homeಕರ್ನಾಟಕಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್‌ಗಳಿಗೆ ಸ್ವಯಂ ರಕ್ಷಣಾ ತರಬೇತಿ!

ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್‌ಗಳಿಗೆ ಸ್ವಯಂ ರಕ್ಷಣಾ ತರಬೇತಿ!

ನಾನು ಕಳೆದ 7 ವರ್ಷಗಳಿಂದ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ. ಕೆಲವು ಪ್ರಯಾಣಿಕರೊಂದಿಗೆ ವ್ಯವಹರಿಸುವಾಗ ನಮಗೆ ತುಂಬಾ ತೊಂದರೆ ಎದುರಾಗುತ್ತಿದೆ - ನಸ್ರೀನ್ (ಕಂಡಕ್ಟರ್)

- Advertisement -
- Advertisement -

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ವಿಶೇಷವಾದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದು ತನ್ನ ಮಹಿಳಾ ಸಿಬ್ಬಂದಿಗೆ ಸ್ವಯಂ ರಕ್ಷಣಾ ತರಬೇತಿಯನ್ನು ನೀಡುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಬಿಎಂಟಿಸಿಯು ತನ್ನ ಮಹಿಳಾ ಸಿಬ್ಬಂದಿಗಳಿಗೆ ಕರಾಟೆ, ಜೂಡೋ, ಮಾರ್ಷಲ್ ಆರ್ಟ್ ಮತ್ತು ಲಿಂಗ ಸಂವೇದನೆ, ಕಾನೂನು ಜ್ಞಾನ, ಸಮಾಲೋಚನೆಯ ಕೌಶಲ್ಯ ಮತ್ತು ಸಾರ್ವಜನಿಕ ಸಂವಾದಕ್ಕೆ ಸಂಬಂಧಿಸಿದಂತೆ ಪ್ರಾಯೋಗಿಕ ತರಬೇತಿಯನ್ನು ನೀಡುತ್ತಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ – #BoycottNetflix ಎಂದ ಭಕ್ತರು!

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಬಿಎಂಟಿಸಿ ಉದ್ಯೋಗಿ ನಸ್ರೀನ್, “ನಾನು ಕಳೆದ 7 ವರ್ಷಗಳಿಂದ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ. ಕೆಲವು ಪ್ರಯಾಣಿಕರೊಂದಿಗೆ ವ್ಯವಹರಿಸುವಾಗ ನಮಗೆ ತುಂಬಾ ತೊಂದರೆ ಎದುರಾಗುತ್ತಿದೆ. ಈ ತರಬೇತಿಯನ್ನು ಪಡೆದ ನಂತರ, ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕೆಂದು ಕಲಿತಿದ್ದೇವೆ. ಇದು ರಾಜ್ಯ ಸರ್ಕಾರದ ಉತ್ತಮ ನಡೆ” ಎಂದು ಹೇಳಿದರು.


ಇದನ್ನೂ ಓದಿ: ಮರಾಠ ಅಭಿವೃದ್ಧಿ ಪ್ರಾಧಿಕಾರ: ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಜಗನ್ನಾಥ ನರೇಂದ್ರ ಮೋದಿಯ ಭಕ್ತ’ ಎಂದ ಸಂಬಿತ್ ಪಾತ್ರ; ವಿರೋಧದ ನಂತರ ಕ್ಷಮೆಯಾಚನೆ

0
ಸದಾ ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ದೇಶದಾದ್ಯಂತ ಟ್ರೋಲ್‌ಗೆ ಗುರಿಯಾಗುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಬಿತ್ ಪಾತ್ರ, ಒಡಿಶಾದ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡುವಾಗ "ಜಗನ್ನಾಥ ಪ್ರಧಾನಿ ನರೇಂದ್ರ...