ಕೇವಲ ಆಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಅದಾಗಿಯೂ ಈ ವಿಷಯವನ್ನು ನಿರ್ಧರಿಸಲು ಕೇಂದ್ರಕ್ಕೆ ಬಿಡುವುದಾಗಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹೇಳಿದ್ದಾರೆ.

ಜಮ್ಮು ಕಾಶ್ಮೀರ

ಕೇವಲ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದರೆ ಸಾಕಾಗುವುದಿಲ್ಲ, ಚೀನಾಕ್ಕೆ ತಕ್ಕ ಉತ್ತರವನ್ನು ನೀಡಬೇಕಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ 59 ಆಪ್‌ಗಳ ನಿಷೇಧದ ಕುರಿತು ಮಾತನಾಡಿ, ಈ ವಿಷಯವನ್ನು ನಿರ್ಧಾರ ತೆಗೆದುಕೊಳ್ಳಲು ಕೇಂದ್ರಕ್ಕೆ ಬಿಡುವುದಾಗಿ ಹೇಳಿದ್ದಾರೆ.

“ಇದು ವಿದೇಶಾಂಗ ವ್ಯವಹಾರಗಳ ಇಲಾಖೆಯ ವಿಷಯವಾಗಿದೆ, ನಾವು ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ. ಆದರೆ, ನಾವು ಒಂದು ಕಡೆ ಬಹಳ ಆಕ್ರಮಣಕಾರಿಯಾಗಿರಬೇಕು ಮತ್ತು ಇನ್ನೊಂದೆಡೆ ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು” ಎಂದು ಅವರು ಹೇಳಿದ್ದಾರೆ.

“ಕೆಲವು ಅಪ್ಲಿಕೇಶನ್‌ಗಳನ್ನು ಮಾತ್ರ ನಿಷೇಧಿಸುವುದರಿಂದ ಸರಿಯಾದ ಉತ್ತರವಾಗುವುದಿಲ್ಲ, ನಾವು ಚೀನಾಕ್ಕೆ ಸೂಕ್ತವಾದ ಉತ್ತರವನ್ನು ನೀಡಬೇಕಾಗಿದೆ” ಎಂದು ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಭಾರತದಲ್ಲಿ ಜನಪ್ರಿಯತೆ ಹೊಂದಿರುವ ಟಿಕ್‌ಟಾಕ್ ಮತ್ತು ಯುಸಿ ಬ್ರೌಸರ್ ಸೇರಿದಂತೆ ಚೀನಾದ 59 ಆ್ಯಪ್‌ಗಳನ್ನು ಭಾರತ ಸೋಮವಾರ ನಿಷೇಧಿಸಿದೆ, ಇದು ದೇಶದ ಸಾರ್ವಭೌಮತ್ವ, ಸಮಗ್ರತೆ ಮತ್ತು ಸುರಕ್ಷತೆಗೆ ಪೂರ್ವಾಗ್ರಹ ಪೀಡಿತವಾಗಿದೆ ಎಂದು ಹೇಳಿದೆ.


ಓದಿ: ವಲಸೆ ಕಾರ್ಮಿಕರಿಗೆ ತಲಾ 10 ಸಾವಿರ ನೀಡಿ: ಮಮತಾ ಬ್ಯಾನರ್ಜಿ ಮನವಿ


 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here