Homeಮುಖಪುಟಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ನೀವು ನನ್ನನ್ನು ತಲೆಕೆಳಗಾಗಿ ಗಲ್ಲಿಗೇರಿಸಿದರೂ ಸರಿಯೇ, ನಾನು ನನ್ನ ಜನರಿಗೆ ದ್ರೋಹ ಬಗೆಯುವುದಿಲ್ಲ - ಅಂಬೇಡ್ಕರ್ ಹೇಳಿಕೆ ಉಲ್ಲೇಖಿಸಿ ಬಿಜೆಪಿ ಟಿಕೆಟ್ ನಿರಾಕರಿಸಿದ ಮಣಿಕಂದನ್

- Advertisement -
- Advertisement -

ಪಂಚರಾಜ್ಯ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ, ಕೇರಳದಲ್ಲಿ ಬಿಜೆಪಿ ಪಕ್ಷವು, ಪಕ್ಷದ ಕಾರ್ಯಕರ್ತನೂ ಅಲ್ಲದ ವ್ಯಕ್ತಿಗೆ ಟಿಕೆಟ್ ಘೋಷಿಸಿದೆ. ಆ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ.

ಇನ್ನು ಮೂರು ವಾರಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಭಾರತೀಯ ಜನತಾ ಪಕ್ಷಕ್ಕೆ ಸ್ಪಷ್ಟನೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. 115 ಕ್ಷೇತ್ರಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿರುವ ನಾಯಕರು ಎರಡು, ಮೂರು ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಎಡವಿದ್ದಾರೆ.

ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಮನಂತವಾಡಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದ ಅಭ್ಯರ್ಥಿ ಸಿ. ಮಣಿಕಂದನ್, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಂಬೇಡ್ಕರ್ ಹೇಳಿಕೆಯನ್ನು ಉಲ್ಲೇಖಿಸಿರುವ ಅವರು “ನೀವು ನನ್ನನ್ನು ತಲೆಕೆಳಗಾಗಿ ಗಲ್ಲಿಗೇರಿಸಿದರೂ ಸರಿಯೇ, ನಾನು ನನ್ನ ಜನರಿಗೆ ದ್ರೋಹ ಬಗೆಯುವುದಿಲ್ಲ” ಹೇಳಿ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ಏಪ್ರಿಲ್ 6 ರ ಚುನಾವಣೆಗೆ ಮನಂತವಾಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಆದಿವಾಸಿ ಪಣಿಯಾ ಸಮುದಾಯದ ಮೊದಲ ಪದವೀಧರರಾದ ಮಣಿಕಂದನ್ ಆಘಾತಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಾಗ, ಅದು ಮನಂತವಾಡಿ ಅಭ್ಯರ್ಥಿಯಾಗಿ ಮಣಿಕುಟ್ಟನ್ (ಮಣಿಕಂದನ್ ಅವರ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಕಂಡುಬರುವ ಹೆಸರು) ಎಂಬ ಹೆಸರು ಕೂಡ ಇತ್ತು. ಅದು ಬೇರೆ ಮಣಿಕಂದನ್ ಇರಬೇಕು ಎಂದುಕೊಂಡಿದ್ದರು.

ವಾಸ್ತವವಾಗಿ ಅದು ತಮ್ಮದೆ ಹೆಸರು, ತಾನೇ ಇಲ್ಲಿನ ಬಿಜೆಪಿ ಅಭ್ಯರ್ಥಿ ಎಂದು ತಿಳಿದಾಗ, ಮಣಿಕಂದನ್ ಅವರು ಚುನಾವಣಾ ಸ್ಪರ್ಧೆಯಲ್ಲಿ ತಾನಿಲ್ಲ ಎಂದು ತಕ್ಷಣ ಸ್ಪಷ್ಟಪಡಿಸಿದ್ದಾರೆ. ಅವರ ಸ್ನೇಹಿತರು ಮತ್ತು ಕುಟುಂಬದವರು ಚುನಾವಣೆಯಿಂದ ಹೊರಗುಳಿಯುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೇರಳದ ಮಾಜಿ ಸಂಸದ ಪಿ.ಸಿ. ಚಾಕೊ

ಆದಿವಾಸಿ ಪಣಿಯಾ ಸಮುದಾಯದ ಮೊದಲ ಪದವೀಧರರಾದ ಮಣಿಕಂದನ್ ವಾಸ್ತವವಾಗಿ ಬಿಜೆಪಿ ಕಾರ್ಯಕರ್ತನೂ ಅಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಯೋಜನೆಯನ್ನು ಹೊಂದಿರಲಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಮನಂತವಾಡಿ ಕ್ಷೇತ್ರವನ್ನು ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರಿಂದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸ್ಥಳೀಯ ನಾಯಕರನ್ನು ಕಣಕ್ಕಿಳಿಸಲು ಆರಂಭದಲ್ಲಿ ಕಿರು-ಪಟ್ಟಿ ಮಾಡಲಾಗಿತ್ತು. ಹಾಗಾಗಿ ಮಣಿಕಂದನ್ ಹೆಸರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಮನಂತವಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ.ಕೆ ಜಯಲಕ್ಷ್ಮಿ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಈಗ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ, ಪಕ್ಷದ ಕಾರ್ಯಕರ್ತನೂ ಅಲ್ಲದ ಮಣಿಕಂದನ್ ನಿರ್ಗಮಿಸುವುದರೊಂದಿಗೆ, ವಯನಾಡಿನ ಮೂರು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿಗೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಯೇ ಇಲ್ಲ.


ಇದನ್ನೂ ಓದಿ: ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...