Homeಮುಖಪುಟಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ:...

ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಕೊರೊನಾ ಕಾರಣ ನೀಡಿ ಪ್ರಧಾನಿಯವರು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರ ನೀಡುವುದಿಲ್ಲ. ಆದರೆ ಜೆಇಇ ಮತ್ತು ನೀಟ್‌ನಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳನ್ನು ಕೇಳುತ್ತಾರೆ ಇದು ಅವರ ಆಡಳಿತ ಎಂದು ಕಿಡಿ ಕಾರಿದ್ದಾರೆ.

- Advertisement -
- Advertisement -

ಸೆ.14 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿರುವ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದು ಮಾಡಿರುವುದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ  ವ್ಯಂಗ್ಯವಾಡಿದ್ದಾರೆ. ಕೊರೊನಾ ಕಾರಣಕ್ಕೆ ಪ್ರಶ್ನೋತ್ತರ ಅವಧಿ ರದ್ದು ಮತ್ತು ಶೂನ್ಯವೇಳೆಯ ಅವಧಿ ಕಡಿಮೆಗೊಳಿಸಿರುವ ಸರ್ಕಾರ, ಜೆಇಇ ಮತ್ತು ನೀಟ್ ಪರೀಕ್ಷೆಗಳಲ್ಲಿ ಉತ್ತರಗಳನ್ನು ನೀಡುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಆರೋಪಿಸಿದ್ದಾರೆ.

ಕೊರೊನಾ ಕಾರಣ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ವಿದ್ಯಾರ್ಥಿಗಳು ಮತ್ತು ಆರು ರಾಜ್ಯಗಳ ಮುಖ್ಯಮಂತ್ರಿಗಳು ಸುಪ್ರೀಂಕೋರ್ಟ್‌‌ಗೆ 2 ಬಾರಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ 2 ಬಾರಿಯೂ ಅವರ ಮನವಿಯನ್ನು ತಿರಸ್ಕರಿಸಿತ್ತು. ಹಾಗಾಗಿ ಈಗ ಮಾತ್ರ ಕೊರೊನಾ ಭಯದ ಕಾರಣ ಹೇಳಿ ಸಂಸತ್‌ನಲ್ಲಿ ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಒವೈಸಿ, ಕೊರೊನಾ ಕಾರಣ ನೀಡಿ ಪ್ರಧಾನಿಯವರು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರ ನೀಡುವುದಿಲ್ಲ. ಆದರೆ ಜೆಇಇ ಮತ್ತು ನೀಟ್‌ನಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳನ್ನು ಕೇಳುತ್ತಾರೆ ಇದು ಅವರ ಆಡಳಿತ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ಜೆಇಇ ಪರೀಕ್ಷೆಗಳು ಆರಂಭವಾಗಿದ್ದು, ಸೆಪ್ಟಂಬರ್ 14 ರಂದು ನೀಟ್ ಪರೀಕ್ಷೆ ನಡೆಯಲಿದೆ.

ಪ್ರಶ್ನೋತ್ತರ ವೇಳೆಯನ್ನು ರದ್ದು ಮಾಡಿರುವುದರಿಂದ ನಾವು ಸಂಸತ್ತಿನಲ್ಲಿ ಕೋವಿಡ್ ಸಂಬಂಧದ ಪ್ರಶ್ನೆಗಳು ಮತ್ತು ಪೂರ್ವ ಲಡಾಖ್‌ನಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಚರ್ಚೆ ನಡೆಸಬಹುದೇ ಎಂದು ತಿಳಿದಿಲ್ಲ. ಬಹುಮತ ಹೊಂದಿರುವ ಸರ್ಕಾರ ಸುಗ್ರೀವಾಜ್ಞೆಗಳನ್ನು ತಂದು ಕಾನೂನುಗಳನ್ನು ಮಾಡಬಹುದು ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಆಂಬುಲೆನ್ಸ್‌ನಲ್ಲಿ ಕೊರೊನಾ ರೋಗಿಯ ಮೇಲೆ ಅತ್ಯಾಚಾರ!: ಚಾಲಕನ ಬಂಧನ

ಮುಂದುವರಿದು, ಹಲವಾರು ದೇಶಗಳ ಪ್ರಧಾನ ಮಂತ್ರಿಗಳು ಕೊರೊನಾವೈರಸ್ ಸಂಬಂಧಿತ ವಿಷಯಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಆದರೆ ನಮ್ಮ ಪ್ರಧಾನಿ ಮೋದಿ ಕೇವಲ ವೀಡಿಯೊ ಸಂದೇಶಗಳನ್ನು ಮಾತ್ರ ಹೊರಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...