Homeಕರ್ನಾಟಕಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ಇನ್ಸ್‌ಪೆಕ್ಟರ್ ವಿರುದ್ದ ನ್ಯಾಯಾಲಯದಲ್ಲಿ ದೂರು

ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ಇನ್ಸ್‌ಪೆಕ್ಟರ್ ವಿರುದ್ದ ನ್ಯಾಯಾಲಯದಲ್ಲಿ ದೂರು

- Advertisement -
- Advertisement -

ಮುಖ್ಯಮ೦ತ್ರಿ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇ೦ದ್ರ ವಿರುದ್ದ ದಾಖಲಾಗಿದ್ದ ದೂರನ್ನು ಆಧರಿಸಿ ಎಫ್‌ಐಆರ್‌ ದಾಖಲಿಸದೆ, ತನಿಖೆಯನ್ನೂ ನಡೆಸದೆ ದೂರನ್ನು ಏಕಾಏಕೀ ಮುಕ್ತಾಯಗೊಳಿಸಿದ್ದಾರೆ ಎಂದು ಆರೋಪಿಸಿ ಶೇಷಾದ್ರಿಪುರ೦ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ವಿರುದ್ದ ನ್ಯಾಯಾಲಯದಲ್ಲಿ ಖಾಸಗಿ ದೂರು (ಪಿಸಿಆರ್‌) ದಾಖಲಾಗಿದೆ.

ಐಪಿಸಿ 217 ಅಡಿಯಲ್ಲಿ ದಾಖಲಿಸಲಾಗಿದ್ದ ದೂರನ್ನಾಧರಿಸಿ ಮುಖ್ಯಮಂತ್ರಿಯ ಮಗ ಬಿ.ವೈ. ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್‌ ಮರಡಿ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಕಾನೂನಿನ ನಿರ್ದೇಶನವನ್ನು ಉಲ್ಲಂಫಿಸಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಪ್ರತಿನಿಧಿ ಆದರ್ಶ ಅಯ್ಯರ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ಜನ ಸಂಘರ್ಷ ಪರಿಷತ್ ಹಲವಾರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ವಿಜಯೇಂದ್ರ ಹಾಗೂ ಶಶಿಧರ ಮರಡಿ ಅವರ ಮೇಲೆ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿತ್ತು. ಅದರೆ ದೂರನ್ನಾಧರಿಸಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿರಲ್ಲ. ಇದಕ್ಕೆ ಜನ ಸಂಘರ್ಷ ಪರಿಷತ್‌ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ಅಕ್ಟೋಬರ್ 3 ರಂದು ಮತ್ತೊಂದು ದೂರು ದಾಖಲಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

0
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು...