Homeಕರ್ನಾಟಕಪತ್ರಕರ್ತರನ್ನು ಕೂಡಾ ಕೊರೊನಾ ವಿಮೆ ವ್ಯಾಪ್ತಿಗೆ ಒಳಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಪತ್ರಕರ್ತರನ್ನು ಕೂಡಾ ಕೊರೊನಾ ವಿಮೆ ವ್ಯಾಪ್ತಿಗೆ ಒಳಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಕಾರ್ಯನಿರತ ಪತ್ರಕರ್ತರನ್ನು ಕೊರೊನಾ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಹಾಗೂ ಕೊರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೇಶವು ಕರೊನಾ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಕೆಲವು ಟ್ವೀಟ್ಟರಿಗರು, ದೇಶದಲ್ಲಿ ಪ್ರತಿಯೊಬ್ಬರೂ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಅಲ್ಲದೆ, ಎಲ್ಲರೂ ಅವರವರ ಹೊಟ್ಟೆ ಪಾಡಿಗಾಗಿ ದುಡಿಯುತ್ತಿದ್ದಾರೆ. ಪತ್ರಕರ್ತರು ಬಕೆಟ್‌ ಹಿಡಿಯುವುದರಲ್ಲಿ ಬ್ಯುಸಿ ಆಗಿದ್ದಾರೆ ಎಂದಿದ್ದಾರೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾದರೆ ಹೋರಾಟ: ಕುಮಾರಸ್ವಾಮಿ ಎಚ್ಚರಿಕೆ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...