Homeಮುಖಪುಟಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿಂದ ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

- Advertisement -
- Advertisement -

ಕಳೆದ ತಿಂಗಳು ನಡೆದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ “ತಪ್ಪಿತಸ್ಥ” ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ವಕೀಲ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್‌ ಅನ್ನು ಕೋರಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಕುರಿತಾಗಿ ಪ್ರಶಾಂತ್‌ ಭೂಷಣ್ ಮಾಡಿರುವ ಟೀಕೆಗಳನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ನ್ಯಾಯಾಲಯ ಶಿಕ್ಷೆಯಾಗಿ ಒಂದು ರುಪಾಯಿ ದಂಡವನ್ನು ಕಟ್ಟುವಂತೆ ಆದೇಶಿಸಿತ್ತು ಹಾಗೂ ಪ್ರಶಾಂತ್‌ ಭೂಷಣ್ ಅದನ್ನು ಪಾವತಿಸಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ಸಹಾರಾ-ಬಿರ್ಲಾ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳಿಗೆ ಲಂಚ ನೀಡಿದ ಆರೋಪವನ್ನು ಒಳಗೊಂಡಂತೆ ಪ್ರಶಾಂತ್‌ ಭೂಷಣ್ ವಾದಿಸಿದ ಪಿಐಎಲ್‌ಗಳನ್ನು ವಜಾಗೊಳಿಸಿದ್ದರಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಈ ಬಗ್ಗೆ ತೀರ್ಪು ನೀಡಬಾರದು ಎಂದು ತಮ್ಮ ಮನವಿಯಲ್ಲಿ ಪ್ರಶಾಂತ್ ಭೂಷಣ್ ಕೋರಿದ್ದಾರೆ.

“ಸಹಾರಾ ಡೈರಿ” – 2014 ರಲ್ಲಿ ಸಹಾರಾ ಗುಂಪಿಗೆ ಸೇರಿದ ಕಚೇರಿಗಳ ಮೇಲೆ ನಡೆದ ದಾಳಿಗಳಲ್ಲಿ ದೊರೆತ ದಾಖಲೆಗಳ ಸಂಗ್ರಹವಾಗಿದ್ದು, ಅದರಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳ ಹೆಸರನ್ನು ಮತ್ತು ಲಂಚವಾಗಿ ಪಾವತಿಸಿದ ಮೊತ್ತವನ್ನು ಬರೆಯಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ವಾಕ್‌ ಸ್ವಾತಂತ್ರ್ಯ ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನ ದುರುಪಯೋಗ: ಪ್ರಶಾಂತ್‌ ಭೂಷಣ್

2017 ರ ಜನವರಿಯಲ್ಲಿ ಪ್ರಶಾಂತ್‌ ಭೂಷಣ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಮನವಿ ಸಲ್ಲಿಸಿದ್ದರು. ಈ ಪ್ರಕರಣವನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ಮತ್ತು ನ್ಯಾಯಮೂರ್ತಿ ಅಮಿತವ ರಾಯ್ ವಿಚಾರಣೆ ನಡೆಸಿದ್ದರು.

ಪ್ರಶಾಂತ್‌ ಭೂಷಣ್ ತನ್ನ ಮನವಿಯಲ್ಲಿ ”ಸಮಂಜಸವಾದ ಆತಂಕವಿದೆ” ಎಂದಿದ್ದು, “ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿಂದ ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆ ಪಡೆಯುವುದಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಮೂಲಭೂತ ತತ್ವಗಳನ್ನು ಉಲ್ಲಂಘಿಸಲಾಗಿದೆ ಎಂದು ಪ್ರಶಾಂತ್‌ ಭೂಷಣ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನಮ್ಮ ದೇಶದ ಶೇ.1 ರಷ್ಟು ಜನರಿಗೂ ನ್ಯಾಯ ಸಿಗುತ್ತಿಲ್ಲ : ಪ್ರಶಾಂತ್‌ ಭೂಷಣ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...