Homeಕರೋನಾ ತಲ್ಲಣಕೊರೊನಾ ನಿರ್ವಹಣೆಯಲ್ಲಿ ಭಾರತಕ್ಕಿಂತ ಪಾಕ್, ಅಫ್ಘಾನಿಸ್ತಾನ ಉತ್ತಮ: ರಾಹುಲ್ ಗಾಂಧಿ

ಕೊರೊನಾ ನಿರ್ವಹಣೆಯಲ್ಲಿ ಭಾರತಕ್ಕಿಂತ ಪಾಕ್, ಅಫ್ಘಾನಿಸ್ತಾನ ಉತ್ತಮ: ರಾಹುಲ್ ಗಾಂಧಿ

ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯೇ 6 ವರ್ಷಗಳ ಘನ ಸಾಧನೆ, ಬಾಂಗ್ಲಾದೇಶ ಕೂಡ ಭಾರತವನ್ನು ಹಿಂದಿಕ್ಕಲಿದೆ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಮಧ್ಯೆ ಈ ಹಣಕಾಸು ವರ್ಷದ ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಕುಸಿತದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಭಾರತದ ನೆರೆಹೊರೆಯ ದೇಶಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳ ಉದಾಹರಣೆ ನೀಡಿ ಅವುಗಳಿಗಿಂತ ಕೆಳಮಟ್ಟದಲ್ಲಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಹುಲ್ ಗಾಂಧಿ, ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಗಳನ್ನು ಉಲ್ಲೇಖಿಸಿ, “ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಕೂಡ ಕೋವಿಡ್ ಅನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ. ಇದು ಬಿಜೆಪಿ ಸರ್ಕಾರದ ಮತ್ತೊಂದು ಘನ ಸಾಧನೆ” ಎಂದು ಐಎಂಎಫ್‌ನ ಪ್ರೊಜೆಕ್ಷನ್ ಗ್ರಾಫ್ ಅನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಈ ಹಣಕಾಸು ವರ್ಷದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವು ತಮ್ಮ ಜಿಡಿಪಿ ಬೆಳವಣಿಗೆಯಲ್ಲಿ 0.40% ಮತ್ತು 5% ನಷ್ಟು ಕುಸಿಯುವ ನಿರೀಕ್ಷೆಯಿದ್ದರೆ, ಭಾರತದ ಜಿಡಿಪಿ 10.3% ರಷ್ಟು ಕುಗ್ಗುವ ಸಾಧ್ಯತೆಯಿದೆ. ಇದು ಯಾವುದೇ ಪ್ರಮುಖ ಉದಯೋನ್ಮುಖ ರಾಷ್ಟ್ರಗಳ ಪೈಕಿ ಅತಿದೊಡ್ಡ ಕುಸಿತ. ಸ್ವಾತಂತ್ರ್ಯದ ನಂತರದ ಅತಿ ಕೆಟ್ಟ ಬೆಳವಣಿಗೆ ಇದು ಎಂದಿದ್ದಾರೆ.

ಆದಾಗ್ಯೂ, ಕೇಂದ್ರ ಸರ್ಕಾರವು ಐಎಂಎಫ್ ಗ್ರಾಫ್‌ ಅನ್ನು ನಿರಾಕರಿಸಿದ್ದು, ತಲಾ ಜಿಡಿಪಿ ಹೆಚ್ಚಾಗಿದೆ ಎಂದು ವಾದಿಸಿದೆ. 2014-15ರಲ್ಲಿ 83,091 ರೂಗಳಿಂದ 2019-20ರಲ್ಲಿ 1,08,620 ರೂಗಳಿಗೆ ಏರಿದೆ. ಇದು 30.7% ನಷ್ಟು ಹೆಚ್ಚಳವಾಗಿದೆ ಎಂದಿದೆ.

’ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯೇ 6 ವರ್ಷಗಳ ಘನ ಸಾಧನೆ, ಬಾಂಗ್ಲಾದೇಶ ಕೂಡ ಭಾರತವನ್ನು ಹಿಂದಿಕ್ಕಲಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

2019ರಲ್ಲಿ ಭಾರತದ ಜಿಡಿಪಿ ಬಾಂಗ್ಲಾದೇಶಕ್ಕಿಂತ 11 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮುಂದಿನ ವರ್ಷ ಭಾರತದ ಜಿಡಿಪಿ 8.8% ರಷ್ಟು ಹೆಚ್ಚಾಗಲಿದೆ ಎಂದು ಐಎಂಎಫ್ ನಿರೀಕ್ಷಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ಆರ್ಥಿಕ ಚೇತರಿಕೆ ಮತ್ತು ಜಾಗತಿಕ ಆರ್ಥಿಕತೆ ಚೇತರಿಕೆಯ ಅನಿಶ್ಚಿತತೆ ಇದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆ ಎಚ್ಚರಿಸಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...