Homeಮುಖಪುಟರಾಹುಲ್‌ ಗಾಂಧಿ ಅವಹೇಳನ: ಮುಂಬೈ ವಿ.ವಿ ನಿರ್ದೇಶಕರಿಗೆ ಕಡ್ಡಾಯ ರಜೆ ಶಿಕ್ಷೆ...

ರಾಹುಲ್‌ ಗಾಂಧಿ ಅವಹೇಳನ: ಮುಂಬೈ ವಿ.ವಿ ನಿರ್ದೇಶಕರಿಗೆ ಕಡ್ಡಾಯ ರಜೆ ಶಿಕ್ಷೆ…

- Advertisement -
- Advertisement -

ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುಂಬೈ ವಿಶ್ವವಿದ್ಯಾಲಯ (ಎಂಯು) ಅಕಾಡೆಮಿ ಆಫ್ ಥಿಯೇಟರ್ ಆರ್ಟ್ಸ್ ನಿರ್ದೇಶಕ ಯೋಗೇಶ್ ಸೋಮನ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ವಿಶ್ವವಿದ್ಯಾಲಯವೂ ತನಿಖಾ ಸಮಿತಿಯನ್ನು ರಚಿಸಿದೆ.

ಸೋಮವಾರ, ಉಪಕುಲಪತಿ ಸುಹಾಸ್ ಪೆಡ್ನೆಕರ್ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಪತ್ರವೊಂದನ್ನು ನೀಡಿ, ಸೋಮನ್ ವಿರುದ್ಧ ವಿದ್ಯಾರ್ಥಿಗಳು ಸಲ್ಲಿಸಿದ ದೂರುಗಳ ಬಗ್ಗೆ ಪರಿಶೀಲಿಸಲು ವಿಶ್ವವಿದ್ಯಾಲಯವು ಸಮಿತಿಯನ್ನು ರಚಿಸಿದೆ ಎಂದು ತಿಳಿಸಿದೆ. ಜೊತೆಗೆ ಸೋಮನ್ ರಜೆ ಮೇಲೆ ಕಳುಹಿಸಲಾಗಿದೆ ಎಂದು ತಿಳಿಸಲಾಗಿದೆ.

ಡಿಸೆಂಬರ್‌ನಿಂದ, ಸೋಮನ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ರಾಹುಲ್‌ ಗಾಂಧಿ ಕುರಿತು ಅವಹೇಳನಕಾರಿ ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾರೆ.  ಅಲ್ಲದೇ ಅವರು ರಾಹುಲ್ ಮತ್ತು ಇಂದಿರಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್‌ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ರಾಹುಲ್ ನೀಡಿದ ಹೇಳಿಕೆಯ ಹಿನ್ನೆಲೆಯಲ್ಲಿ ಸೋಮನ್ ಹೀಗೆ ಮಾಡಿದ್ದರು.

ಪೆಡ್ನೇಕರ್ ತಮ್ಮ ಪತ್ರದಲ್ಲಿ, ವಿದ್ಯಾರ್ಥಿಗಳು ಮಾಡಿದ ಎಲ್ಲಾ ಆರೋಪಗಳ ಬಗ್ಗೆ ತನಿಖಾ ಸಮಿತಿ ಪರಿಶೀಲಿಸಲಿದೆ ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

0
"ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?" "ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು,...