HomeUncategorizedರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಕೊರೊನಾ ಪರಿಹಾರಕ್ಕೆ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ

- Advertisement -
- Advertisement -

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ನಾಯಕರ ಜೊತೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ದೆಹಲಿ ಭೇಟಿಯ ಪ್ರಮುಖ ವಿಷಯವಾಗಿದೆ. ಈ ಕುರಿತು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಿನ್ನೆಯಷ್ಟೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದು, ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪಗೆ ಸಲಹೆ ನೀಡುತ್ತಾ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಟ್ವಿಟ್ಟರ್‌ನಲ್ಲಿ, ರಾಜ್ಯದ ಸಮಸ್ಯೆಗಳ ಪಟ್ಟಿ, ಕೇಂದ್ರ ಸರ್ಕಾರ ಕೊಡಬೇಕಾಗಿರುವ ಪರಿಹಾರಗಳ ಕುರಿತು ಸಿಎಂ ಯಡಿಯೂರಪ್ಪಗೆ ನೆನಪು ಮಾಡಿದ್ದಾರೆ. “ಕಾಡಿಬೇಡಿ ಪ್ರಧಾನಿ ಭೇಟಿಗೆ ಅವಕಾಶ ಪಡೆದಿದ್ದೀರಿ, ಈ ಅವಕಾಶವನ್ನು ಕುರ್ಚಿ ಉಳಿಸಿಕೊಳ್ಳುವುದಕ್ಕೆ ಬಳಸದೆ ರಾಜ್ಯದ ಹಿತರಕ್ಷಣೆಗಾಗಿ ಬಳಸಿ” ಎಂದು ಕಿವಿಮಾತು ಹೇಳಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಗೆ 35,000ಕೋಟಿ ಪರಿಹಾರ ಕೇಳಿದ್ದೀರಿ. ಆದರೆ ಸಿಕ್ಕಿದ್ದು 1,869 ಕೋಟಿ. ಈ ಬಾರಿಯೂ 8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆಗೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಲು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್‌ಡಿಆರ್‌ಎಫ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ ಎಂದಿದ್ದಾರೆ.

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ಬಗ್ಗೆ ಪ್ರಧಾನಿಯವರಿಗೆ ಜವಾಬ್ದಾರಿ ನೆನಪಿಸಿ, ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದಿದ್ದಾರೆ.

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿಯವರು, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ಪ್ರಧಾನಿಯವರ ಕಣ್ಣು ತೆರಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಕೊರೊನಾ ಪರಿಹಾರಕ್ಕೆ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದಿದ್ದು, ಜಿಎಸ್‌ಟಿ ಪರಿಹಾರ ನೀಡದೇ ಕೇಂದ್ರ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆದಿದೆ. ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿ ಪಡಿಸಲು ಹೇಳಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಸಂಪುಟ ವಿಸ್ತರಣೆಯನ್ನು ಪ್ರಧಾನವಾಗಿಟ್ಟುಕೊಂಡು ದೆಹಲಿ ತಲುಪಿರುವ ಯಡಿಯೂರಪ್ಪ ಅವರಿಗೆ ರಾಜ್ಯದ ಸಮಸ್ಯೆಗಳ ಪಟ್ಟಿಯನ್ನು ನೀಡಿ ಬಗೆ ಹರಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಚಲೋ’ ಮೆರವಣಿಗೆಗೆ 100 ದಿನ; ಶಂಭು-ಖಾನೌರಿ ಗಡಿ ಬಿಂದುಗಳಲ್ಲಿ ಜಮಾಯಿಸಿದ ಸಾವಿರಾರು ಅನ್ನದಾತರು

0
ಬೆಳೆಗಳಿಗೆ ಎಂಎಸ್‌ಪಿ ಕಾನೂನು ಖಾತರಿಯೂ ಸೇರಿದಂತೆ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ರೈತರು ನಡೆಯುತ್ತಿರುವ ಪ್ರತಿಭಟನೆಯು 100 ದಿನಗಳನ್ನು ಪೂರ್ಣಗೊಳಿಸುತ್ತಿದ್ದು, ಶಂಭು ಮತ್ತು ಖನೌರಿ ಗಡಿ ಬಿಂದುಗಳಲ್ಲಿ...