Homeಕರ್ನಾಟಕಇಂದಿನಿಂದ ಸಿಎಂ ಯಡಿಯೂರಪ್ಪ ವರ್ಕ್‌ ಫ್ರಂ ಹೋಮ್‌: ಕಾರಣವೇನು?

ಇಂದಿನಿಂದ ಸಿಎಂ ಯಡಿಯೂರಪ್ಪ ವರ್ಕ್‌ ಫ್ರಂ ಹೋಮ್‌: ಕಾರಣವೇನು?

- Advertisement -
- Advertisement -

ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿಯಲ್ಲಿ ಕೆಲ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸಿಎಂ ಯಡಿಯೂರಪ್ಪ ವರ್ಕ್‌ ಫ್ರಂ ಹೋಮ್ ಮಾಡಲಿದ್ದಾರೆ..

ಈ ಕುರಿತು ಸ್ವತಃ ಯಡಿಯೂರಪ್ಪರವರೆ ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್‌ ಖಾತೆ ಮೂಲಕ ತಿಳಿಸಿದ್ದು ನಾನು ಆರೋಗ್ಯವಾಗಿದ್ದೇನೆ, ಆತಂಕ ಪಡಬೇಡಿ ಎಂದಿದ್ದಾರೆ.

“ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ.

ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ” ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ…

Posted by Chief Minister of Karnataka on Friday, July 10, 2020

ಕೊರೊನಾ ಪ್ರಕರಣಗಳಲ್ಲಿ ಕರ್ನಾಟವು ಒಟ್ಟು 31,105 ವರದಿಗಳೊಂದಿಗೆ ದೇಶದಲ್ಲಿ 6 ನೇ ಸ್ಥಾನಕ್ಕೆ ತಲುಪಿದೆ. 17,786 ಸಕ್ರಿಯ ಪ್ರಕರಣಗಳೊಂದಿಗೆ ದೇಶದಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೂ 486 ಸಾವುಗಳನ್ನು ದಾಖಲಿಸಿದ್ದರೆ, 12,883 ಸೋಂಕಿತರು ಗುಣಮುಖರಾಗಿದ್ದಾರೆ.


ಇದನ್ನೂ ಓದಿ: ಕೊರೊನಾ: ತ್ವರಿತ ಲಸಿಕೆ ಹೆಸರಿನಲ್ಲಿ ನಮ್ಮ ಜೀವಗಳೊಂದಿಗೆ ಚೆಲ್ಲಾಟವಾಡುತ್ತಿರುವ ICMR‌!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...