Homeಮುಖಪುಟಅಜಿತ್ ಪವಾರ್‌ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ, ಇದು ಖಂಡನೀಯ- ಸಿಎಂ ಯಡಿಯೂರಪ್ಪ

ಅಜಿತ್ ಪವಾರ್‌ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ, ಇದು ಖಂಡನೀಯ- ಸಿಎಂ ಯಡಿಯೂರಪ್ಪ

ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ. ಅನಗತ್ಯವಾಗಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ.

- Advertisement -
- Advertisement -

ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಪುಣ್ಯಸ್ಮರಣೆ ಅಂಗವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಂಗಳವಾರ ಬೆಳಗಾವಿ ನಮ್ಮದು ಎಂದಿದ್ದ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಜಿತ್ ಪವಾರ್‌ ಎರಡು ರಾಜ್ಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಇದನ್ನೂ ಖಂಡಿಸುತ್ತೇನೆ. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ. ಅನಗತ್ಯವಾಗಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಮರಾಠಿಗರು ಸಹ ನಮ್ಮ ರಾಜ್ಯದ ಕನ್ನಡಿಗರಂತೆಯೇ, ನಾನು ಮರಾಠಗರ ಅಭಿವೃಧಿಗಾಗಿ ಪ್ರಾಧಿಕಾರ ಮಾಡಿದ್ದೇನೆ. ಮರಾಠಿಗರು ಕಟ್ಟಾ ಹಿಂದುತ್ವವಾದಿಗಳು. ಬೆಳಗಾವಿ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾರಿ ಪ್ರಮಾಣದಲ್ಲಿ ಭಾಗವಹಿಸಿ, ಬೆಂಬಲಿಸಿದ್ದಾರೆ. ಇಂತಹ ಸಮಯದಲ್ಲಿ ಅಜಿತ್ ಪವಾರ್ ಬೆಂಕಿಹಚ್ಚುವ ಕೆಲಸ ಮಾಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಮರಾಠಿ ಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿರುವ ಕರ್ನಾಟಕದ ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿ ಸೇರಿದ ಅಖಂಡ ಮಹಾರಾಷ್ಟ್ರದ ಅಭಿವೃದ್ಧಿ ಬಾಳಾ ಠಾಕ್ರೆಯವರ ಕನಸಾಗಿತ್ತು. ಅದನ್ನ ನಾವು ನನಸು ಮಾಡಬೇಕು ಎಂದು ಅಜಿತ್ ಪವಾರ್ ಹೇಳಿದ್ದರು.

ಇದನ್ನೂ ಓದಿ: ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕೂಡ “ಬೆಳಗಾವಿ ಕರ್ನಾಟಕದ ಭಾಗವಾಗಿದೆ ಎಂದು ಹೇಳಿರುವ ಮಹಾಜನ್ ವರದಿಯಲ್ಲಿ ನಮಗೆ ನಂಬಿಕೆ ಇದೆ. ಅಜಿತ್ ಪವಾರ್ ಹೇಳುತ್ತಿರುವುದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ನಾವು ಖಂಡಿತವಾಗಿ ಪತ್ರ ಬರೆಯುತ್ತೇವೆ” ಎಂದಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದವನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಅಕ್ಟೋಬರ್ 25, 1966 ರಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮೆಹರ್ ಚಂದ್ ಮಹಾಜನ್ ಅವರ ನೇತೃತ್ವದಲ್ಲಿ ಮಹಾಜನ್ ಆಯೋಗವನ್ನು ರಚಿಸಿತ್ತು.

ಈ ಆಯೋಗವು ನವೆಂಬರ್ 15, 1972 ರಲ್ಲಿ ಕೇಂದ್ರ ಗೃಹ ಇಲಾಖೆಗೆ ತನ್ನ ವರದಿ ಸಲ್ಲಿಸಿತ್ತು. ಇದರ  ಶಿಫಾರಸ್ಸಿನಂತೆ ಬೆಳಗಾವಿ ತನಗೆ ಸಿಗುವುದಿಲ್ಲ ಎಂದು ಗೊತ್ತಾದಾಗ ಮಹಾರಾಷ್ಟ್ರ ಮಹಾಜನ ಆಯೋಗದ ವರದಿಯನ್ನು ತಿರಸ್ಕರಿಸಿತು. ಗಡಿ ವಿವಾದವನ್ನು ಆರಂಭಿಸಿತು.

ಇತ್ತ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರು ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ಎದುರಿಸುತ್ತಿದ್ದಾರೆ.  ರಾಜ್ಯ ಸರ್ಕಾರದ ಈ ಧೋರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

“ಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಸುಮಾರು 30,000 ಮರಾಠ ಸಮುದಾಯದ ಮತದಾರರನ್ನು ಸೆಳೆಯಲು ಈ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಇದನ್ನೂ ಓದಿ: ‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...