Homeಚಳವಳಿಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

- Advertisement -
- Advertisement -

ಹಲವು ಕನ್ನಡಪರ ಸಂಘಟನೆಗಳು ಸೇರಿ ಮೇ 3ರಂದು KarnatakaJobsForKannadigas ಹ್ಯಾಷ್ ಟ್ಯಾಗ್ ಬಳಸಿ ಟ್ವಿಟರ್ ನಲ್ಲಿ ಟ್ರೆಂಡ್ ಮಾಡುವ ಮೂಲಕ ಮೂಲಕ ಗಮನಸೆಳೆದಿದ್ದರು. ಈ ಅಭಿಯಾನಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದರು. ಅದರ ಮುಂದುವರಿದ ಭಾಗವಾಗಿ “ಕರ್ನಾಟಕ ರಣಧೀರ ಪಡೆ, ಕರುನಾಡ ಸೇವಕರು ಮತ್ತು ಇತರ ಕನ್ನಡಪರ ಸಂಘಟನೆಗಳು ಇಂದು ಬೆಂಗಳೂರಿನ ಮೈಸೂರು ಬ್ಯಾಂಕು ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಹೋರಾಟವನ್ನು ಹಂತ ಹಂತವಾಗಿ ಗಟ್ಟಿಗೊಳಿಸಲು ತೀರ್ಮಾನಿಸಿದ್ದಾರೆ.

ಆ ಮೂಲಕ ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕಟ್ಟುನಿಟ್ಟಾಗಿ ಕನ್ನಡಿಗರಿಗೆ ಮೀಸಲಾತಿ ನೀಡಲು ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಮತ್ತು ಈ ಬಗ್ಗೆ ಹಕ್ಕೊತ್ತಾಯ ಮಂಡಿಸಲು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಚಾಲ್ತಿಯಲ್ಲಿಟ್ಟಿದ್ದಾರೆ.

ಹರೀಶ್ ಕುಮಾರ್ ಬಿ

ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾದುದು. ಸಾಕಷ್ಟು ಉದ್ಯೋಗ ಸೃಷ್ಟಿಯಾಗದೇ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಇಲ್ಲಿ ಸೃಷ್ಟಿಯಾದ ಉದ್ಯೋಗಗಳನ್ನು ಪರಭಾಷಿಕರು ಬಂದು ಕಬಳಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ನೆಲದಲ್ಲಿನ ಉದ್ಯೋಗ ನಮ್ಮವರಿಗೆ ಸಿಗದಂತಾಗಿದೆ. ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿಯೇ ಬೀಡುಬಿಟ್ಟಿದ್ದರೂ ಇಲ್ಲಿನ ಬಹುರಾಷ್ತ್ರೀಯ ಕಂಪನಿಗಳು, ಬ್ಯಾಂಕುಗಳು ಮತ್ತು ಇತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಮೀನಮೇಷ ಎಣಿಸುತ್ತಿವೆ ಎಂದು ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷರಾದ ಹರೀಶ್ ಕುಮಾರ್.ಬಿ ಅಭಿಪ್ರಾಯಪಟ್ಟಿದ್ದಾರೆ.

 

ರೂಪೇಶ್ ರಾಜಣ್ಣ

ಎಚ್ಚೆತ್ತ ಕನ್ನಡಿಗರು ಇದೇ ತಿಂಗಳ 3ನೇ ತಾರೀಖಿನಂದು ನಡೆಸಿದ #KarnatakaJobsForKannadigas ಟ್ವಿಟರ್ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತಾ ನಮ್ಮ ಮುಖ್ಯಮಂತ್ರಿಯವರು “ಕನ್ನಡಿಗರ ಹಕ್ಕೊತ್ತಾಯ ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು” ಎಂದು ಹೇಳಿದ್ದರು. ಆ ನಂತರ ನಾವು ಸಮಸ್ತ ಕನ್ನಡಿಗರ ಪರವಾಗಿ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದ್ದೆವು. ನಮ್ಮ ನೆಲದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ನಮ್ಮವರಿಗೇ ಸಿಗಬೇಕು ಎಂದು ಸ್ಪಷ್ಟವಾಗಿ ಕೇಳುವ ನಿಟ್ಟಿನಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ವಿಧಾನಸೌಧದವರೆಗೆ ಮಾನವ ಸರಪಳಿ ರಚಿಸುತ್ತಾ ಮತ್ತೊಮ್ಮೆ ನಮ್ಮ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೆನಪಿಸಬಯಸುತ್ತೇವೆ ಎಂದು ಕರುನಾಡ ಸೇವಕರು ರಾಜ್ಯಾಧ್ಯಕ್ಷರಾದ ರೂಪೇಶ್ ರಾಜಣ್ಣ ಹೇಳಿದ್ದಾರೆ.

ಈ ಹೋರಾಟದ ಪ್ರಮುಖವಾದ ಹಕ್ಕೊತ್ತಾಯಗಳು ಕೆಳಗಿನಂತಿವೆ.
1.ಎಲ್ಲಾ ಖಾಸಗಿ ವಲಯದ ಉದ್ಯಮಗಳಿಗೆ ರಾಜ್ಯ ಸರ್ಕಾರ ಹಲವು ಮೂಲಭೂತ(ನೆಲ,ಜಲ,ವಿದ್ಯುತ್, ರಸ್ತೆ ಮುಂತಾದ) ಸವಲತ್ತುಗಳನ್ನು ನೀಡುತ್ತಿರುವುದರಿಂದ ಕಟ್ಟುನಿಟ್ಟಾಗಿ ಸರೋಜಿನಿ ಮಹಿಷಿ ವರದಿ ಅನ್ವಯ ’ಸಿ’ ಮತ್ತು ’ಡಿ’ ವರ್ಗದ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಮತ್ತು ಉನ್ನತ ಹುದ್ದೆಗಳಲ್ಲಿ ಕನಿಷ್ಠ 80%ರಷ್ಟು ಉದ್ಯೋಗಗಳು ಸ್ಥಳಿಯರಿಗೆ(ಕನ್ನಡಿಗರಿಗೆ) ಮೀಸಲಿಡಲು ಕರಾರು ಪತ್ರದಲ್ಲೇ ಪೂರ್ವಷರತ್ತು ಹಾಕಬೇಕು. ಇಲ್ಲಿನ ಐಟಿ ಉದ್ಯಮಗಳಿಗೆ ರಾಜ್ಯದ ಇಂಜಿನಿಯರಿಂಗ್/ಮ್ಯಾನೇಜ್ಮೆಂಟ್ ಕಾಲೇಜುಗಳಿಂದಲೇ ಕ್ಯಾಂಪಸ್ ನೇಮಕಾತಿ ಮಾಡಿಕೊಳ್ಳಲು ಸೂಚಿಸಬೇಕು.

2.ಮಹಾರಾಷ್ಟ್ರದಲ್ಲಿ ಇರುವಂತೆ ರಾಜ್ಯ ಸರ್ಕಾರ ಸ್ಥಳೀಯರಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ರಾಜ್ಯದ ಖಾಸಗಿ ಉದ್ದಿಮೆಗಳಿಂದ ಪ್ರತಿವರ್ಷ ಘೋಷಣೆ ಪತ್ರ ಪಡೆಯಬೇಕು. ಅಭ್ಯರ್ಥಿಗಳನ್ನು ಸ್ಥಳೀಯರು ಎಂದು ಪರಿಗಣಿಸಲು 15 ವರ್ಷಗಳ ಕಾಲ ಅವರು ರಾಜ್ಯದಲ್ಲಿ ವಾಸವಾಗಿದ್ದಲ್ಲದೇ ರಾಜ್ಯಭಾಷೆಯಾದ ಕನ್ನಡದಲ್ಲಿ ಮಾತನಾಡಲು,ಓದಲು ಮತ್ತು ಬರೆಯಲು ಬರಬೇಕು.

3.ರಾಜ್ಯದ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೂ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಹೊರ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆದು ನೇಮಕ ಮಾಡಿಕೊಳ್ಳಬೇಕು.

4.ರಾಜ್ಯದಲ್ಲಿ ವ್ಯವಹರಿಸುವ ಎಲ್ಲಾ ಬ್ಯಾಂಕುಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷಾಜ್ಞಾನವನ್ನು ಕಡ್ಡಾಯಗೊಳಿಸಬೇಕು.ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯು ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯುವ ಅವಕಾಶವಿರಬೇಕು.

5.ರಾಜ್ಯ/ಕೇಂದ್ರ ಸರ್ಕಾರಿ ಉದ್ಯಮಗಳು ಹಾಗೂ ಇಲಾಖೆಗಳಲ್ಲಿ ದಿನಗೂಲಿ ಕೆಲಸಗಳಿಗೆ ಕಾರ್ಮಿಕರನ್ನು/ನೌಕರರನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕು. ಹೊರಗುತ್ತಿಗೆ ಸಂಸ್ಥೆಗಳಿಗೂ ಈ ಷರತ್ತು ವಿಧಿಸಬೇಕು.

6.ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

ಇದನ್ನು ಓದಿ: ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ರಮಾನಂದ್ ಅಂಕೋಲ

ಉದ್ಯೋಗದ ವಿಚಾರದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಬಡಿದೆಬ್ಬಿಸಲು ಜನಜಾಗೃತಿ ಆಗಬೇಕಾಗಿರುವುದು ಸಹ ಇಂದಿನ ತುರ್ತು ಸದ್ಯ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಕ್ರಿಯಾತ್ಮಕವಾಗಿ ಏನಾದರೂ ಮಾಡಲು ಅವರಿಗೆ ನೀತಿಸಂಹಿತೆ ಮುಗಿಯುವ ಮೇ23ರ ನಂತರವೂ ಒಂದೆರಡು ವಾರ ಸಮಯ ನೀಡಲು ನಾವು ಸಿದ್ದರಿದ್ದೇವೆ. ಆಗಲೂ ಸಹ ತಾವು ಕೊಟ್ಟ ಭರವಸೆಯನ್ನು ಈಡೇರಿಸಲು ಅವರು ಮುಂದಾಗದಿದ್ದರೆ ಹೋರಾಟಕ್ಕಿಳಿಯುವುದು ಅನಿವಾರ್ಯವಾಗುತ್ತದೆ ಎಂದು ಸರ್ಕಾರಕ್ಕೆ ಕರ್ನಾಟಕ ರಣಧೀರ ಪಡೆಯ ಖಜಾಂಚಿ ರಮಾನಂದ ಅಂಕೋಲಾ ಎಚ್ಚರಿಕೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...