Homeಮುಖಪುಟತೀವ್ರ ಟೀಕೆ: ಪೊಲೀಸ್ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಕೇರಳ ಸರ್ಕಾರ!

ತೀವ್ರ ಟೀಕೆ: ಪೊಲೀಸ್ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಕೇರಳ ಸರ್ಕಾರ!

ನಿನ್ನೆಯಷ್ಟೇ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದಿದ್ದ ಸರ್ಕಾರ, ಇದೀಗ ತಿದ್ದುಪಡಿಯನ್ನು ಹಿಂಪಡೆಯುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ ಎಂದು ಹೇಳಿದೆ.

- Advertisement -
- Advertisement -

ಭಾರಿ ವಿವಾದಕ್ಕೀಡಾಗಿದ್ದ ಕೇರಳ ಪೊಲೀಸ್ ಕಾಯ್ದೆ ತಿದ್ದುಪಡಿಯನ್ನು ರದ್ದುಗೊಳಿಸಲು ಕೇರಳ ಸರ್ಕಾರ ಇಂದು ನಿರ್ಧರಿಸಿದೆ. ಪೊಲೀಸ್ ಕಾಯ್ದೆಗೆ ಸೆಕ್ಷನ್  118 ಎ ಸೇರಿಸಿ ಸುಗ್ರಿವಾಜ್ಞೆ ಹೊರಡಿಸಿದ ಹಿನ್ನಲೆಯಲ್ಲಿ ದೇಶದಾದ್ಯಂತ ಕೇರಳ ಸರ್ಕಾರವು ತೀವ್ರ ಟೀಕೆಗೆ ಒಳಗಾಗಿದ್ದಲ್ಲದೆ ಸಿಪಿಎಂ ಕೇಂದ್ರ ಸಮಿತಿ ಕಾಯ್ದೆಯ ಬಗ್ಗೆ ವಿರೋಧ ವ್ಯಕ್ತಪಡಿಸಿತ್ತು.

ನಿನ್ನೆಯಷ್ಟೇ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದಿದ್ದ ಸರ್ಕಾರ, ಇದೀಗ ತಿದ್ದುಪಡಿಯನ್ನು ಹಿಂಪಡೆಯುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ:ಕೇರಳ: ಪೊಲೀಸ್ ಕಾಯ್ದೆ ತಿದ್ದುಪಡಿಗೆ ಸಿಪಿಎಂ ಕೇಂದ್ರ ಸಮಿತಿ ವಿರೋಧ

ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟ್‌ಗಳನ್ನು ಮಾಡುವವರಿಗೆ ಐದು ವರ್ಷಗಳವರೆಗೆ ಶಿಕ್ಷೆಯ ವಿಧಿಸುವುದಾಗಿ ಈ ಕಾನೂನು ಹೇಳಿಕೊಂಡಿತ್ತು. ಮಹಿಳೆಯರು ಮತ್ತು ಮಕ್ಕಳ ಮೇಲಿನ ಸೈಬರ್ ದಾಳಿಯನ್ನು ತಡೆಗಟ್ಟಲು ಸೆಕ್ಷನ್ 118-ಎ ಸೇರಿಸಲು ಉದ್ದೇಶಿಸಿ ಕೇರಳ ಪೊಲೀಸ್ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಶನಿವಾರ ಸಹಿ ಹಾಕಿದ್ದರು.

ಆದರೆ ನಿನ್ನೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ನೀಡಿ, “ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಹೋರಾಡುತ್ತಿರುವವರು ಕಳವಳ ವ್ಯಕ್ತಪಡಿಸಿರುವ ಇಂತಹ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವುದಿಲ್ಲ ಹಾಗೂ ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಹೇಳಿದ್ದರು. ಇಂದು ಸರ್ಕಾರ ಸುಗ್ರಿವಾಜ್ಞೆ ಮೂಲಕ ಘೋಷಿಸಿದ್ದ ತಿದ್ದುಪಡಿಯನ್ನು ರದ್ದುಪಡಿಸುವುದಾಗಿ ಹೇಳಿದೆ.

ಇದನ್ನೂ ಓದಿ: ಪೊಲೀಸ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...