Homeಮುಖಪುಟರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 22 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

ರೈತರು ದೆಹಲಿ ತಲುಪುವು ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಇಲ್ಲಿಂದ ಹೊರಗೆ ಕಳಿಸಬೇಕೆಂದು ಸುಪ್ರೀಂನಲ್ಲಿ ದಾಖಲಾದ ಸರಣಿ ಪಿಐಎಲ್‌ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೆಹಲಿಯ ರಸ್ತೆಗಳನ್ನು ಮುಚ್ಚದೆ ರೈತರು ಪ್ರತಿಭಟನೆ ಮುಂದುವರೆಸಬಹುದು” ಎಂದಿದೆ.

ನಿನ್ನೆ ಈ ವಿಚಾರದ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಈ ಸಮಸ್ಯೆಯನ್ನು ನಿಭಾಯಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ, ಕೃಷಿಯ ಜ್ಞಾನ ಹೊಂದಿರುವ ಸ್ವತಂತ್ರ ಸದಸ್ಯರು ಮತ್ತು ಎರಡೂ ಕಡೆಯವರನ್ನು ಕೇಳಿ ಮತ್ತು ಏನು ಮಾಡಬೇಕೆಂಬುದರ ಬಗ್ಗೆ ವರದಿ ನೀಡಿ ಎಂದು ಎಸ್‌.ಎ ಬೋಬ್ಡೆ ತಿಳಿಸಿದ್ದರು.  ಮಾತುಕತೆಗಳಲ್ಲಿ ಕೇಂದ್ರವು ಯಶಸ್ವಿಯಾಗುವುದಿಲ್ಲ ಎಂದು ನಾವು ನಿನ್ನೆ ಗಮನಿಸಿದ್ದೇವೆ. ನಿಮ್ಮ ತೀರ್ಮಾನಗಳನ್ನು ರೈತರು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುವುದಿಲ್ಲ. ಸಮಿತಿ ತೀರ್ಮಾನಿಸಲಿ ಎಂದು ಬೋಡ್ಡೆ ಹೇಳಿದ್ದಾರೆ.

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.​

“ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಹಿಂಸಾಚಾರವಿಲ್ಲದೆ ಪ್ರತಿಭಟನೆಗಳು ಮುಂದುವರಿಯಬಹುದು ಹೀಗಾಗಿ ಪೊಲೀಸರು ಈ ಹೋರಾಟವನ್ನು ನಿಗ್ರಹಿಸಲು ಮುಂದಾಗುವುದು ಸರಿಯಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ತಿಳಿಸಿದ್ದಾರೆ.

“ಕೇವಲ ಪ್ರತಿಭಟನೆಗಾಗಿ ಪ್ರತಿಭಟನೆಗಳಾಗಬಾರದು. ಅವು ಕೃಷಿ ದೃಷ್ಟಿಕೋನದಿಂದ ಕೂಡಿರಬೇಕು ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹರೀಶ್​ ಸಾಳ್ವೆ ವಾದ ಮಂಡಿಸಿದಾಗ ಅದನ್ನೆ ನಾವು ಹೇಳುತ್ತಿರುವುದು ಎಂದು ಸುಪ್ರೀ ಕೋರ್ಟ್ ಹೇಳಿದೆ.

“ಪ್ರತಿಭಟನೆಯ ಉದ್ದೇಶವು ಅಹಿಂಸಾತ್ಮಕ ವಿಧಾನಗಳಿಂದ ಈಡೇರಬೇಕು. ಪ್ರತಿಭಟನೆಗಳು ಸಮಸ್ಯೆಗಳ ಬಗ್ಗೆ ಇರಬೇಕು. ಅನ್ಯಾಯಕ್ಕೊಳಗಾದವರಿಗೆ ಪ್ರತಿಭಟಿಸಲು ತಮ್ಮ ಪರವಾದ ನ್ಯಾಯವನ್ನು ಮಂಡಿಸಲು ಅವಕಾಶ ನೀಡಬೇಕು ಮತ್ತು ಸಮಸ್ಯೆಗೆ ಕಾರಣವಾದ ವ್ಯಕ್ತಿಗಳು ಅದಕ್ಕೆ ತಕ್ಕ ಉತ್ತರ ನೀಡಬೇಕು” ಎಂದು ಎಸ್‌.ಎ ಬೋಬ್ಡೆ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಔಷಧಿ ಪೂರೈಕೆಗೆ ತಡೆ, ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆ ಆರೋಪ: ಹೋರಾಟನಿರತ ರೈತರ ಮೇಲೆ ಸುಪ್ರೀಂನಲ್ಲಿ PIL

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...