Homeಮುಖಪುಟಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

ಮುಂಬೈ, ಚೆನ್ನೈ, ಕೋಲ್ಕತ್ತಾ, ಅಹಮದಾಬಾದ್, ಬೆಂಗಳೂರು, ಇಂದೂರ್, ದೆಹಲಿ, ಪುಣೆ, ಥಾಣ, ಜೈಪುರ್, ಸೂರತ್ ಈ ಹನ್ನೊಂದು ನಗರಗಳಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ.

- Advertisement -
- Advertisement -

ನಾಲ್ಕನೇ ಹಂತದ ಲಾಕ್‌ಡೌನ್‌ ಮುಕ್ತಾಯವಾಗುತ್ತಿದೆ. ಈ ಸಂದರ್ಭದಲ್ಲಿ ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಳೆದೊಂದು ವಾರದಿಂದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವುದರಿಂದ ಮತ್ತು ದೇಶದಲ್ಲಿ ಪ್ರಕರಣಗಳ ಸಂಖ್ಯೆ ಒಂದೂವರೆ ಲಕ್ಷಕ್ಕೆ ತಲುಪಿರುವುದರಿಂದ ಲಾಕ್‌ಡೌನ್‌ ಅನ್ನು ಮತ್ತೆರೆಡು ವಾರ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದ್ದಾರೆ ಎನ್ನಲಾಗಿದೆ.

5ನೇ ಹಂತದ ಲಾಕ್‌ಡೌನ್‌ನಲ್ಲಿ ಭಾರತದ ಕೊರೊನಾ ಹಾಟ್‌ಸ್ಪಾಟ್‌ಗಳಾದ 11 ಮಹಾನಗರಗಳ ಮೇಲೆ ಕಣ್ಣಿಡಲು ನಿರ್ಧರಿಸಿದ್ದು, ಈ  11ನಗರಗಳಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಬಿಗಿಗೊಳಿಸುವ ಸಾಧ್ಯತೆಯಿದೆ.

ಮುಂಬೈ, ಚೆನ್ನೈ, ಕೋಲ್ಕತ್ತಾ, ಅಹಮದಾಬಾದ್, ಬೆಂಗಳೂರು, ಇಂದೂರ್, ದೆಹಲಿ, ಪುಣೆ, ಥಾಣ, ಜೈಪುರ್, ಸೂರತ್ ಈ ಹನ್ನೊಂದು ನಗರಗಳಲ್ಲಿ ಲಾಕ್‌ಡೌನ್‌ ಬಿಗಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ. ಈ ನಗರಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿವೆ. ಶೇಕಡಾ 70ರಷ್ಟು ಪ್ರಕರಣಗಳು ಈ 11 ನಗರಗಳಿಂದಲೇ ವರದಿಯಾಗುತ್ತಿವೆ ಎನ್ನಲಾಗಿದೆ.

ಉಳಿದ ನಗರಗಳಲ್ಲಿ ಲಾಕ್‌ಡೌನ್‌ನಿಂದ ವಿನಾಯಿತಿ ನೀಡುವ ಸಾಧ್ಯತೆಯಿದೆ. ಈಗಾಗಲೇ ಕರ್ನಾಟಕದ ಕೆಲವು ನಗರಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಏರಿಯಾಗಳಲ್ಲಿ ಇಡೀ ಏರಿಯಾವನ್ನು ಲಾಕ್‌ಡೌನ್‌ ಮಾಡದೇ ಕೇವಲ ಸೋಂಕು ಕಾಣಿಸಿಕೊಂಡ ರಸ್ತೆಯನ್ನು ಮಾತ್ರ ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ.

ಲಾಕ್‌ಡೌನ್‌ 5.Oನಲ್ಲಿ ಆಟೋ, ಟ್ಯಾಕ್ಸಿ ಓಡಾಟಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಜೊತೆಗೆ ಷರತ್ತುಗಳೊಂದಿಗೆ ದೇವಸ್ಥಾನ, ಚರ್ಚ್‌ ಮತ್ತು ಮಸೀದಿ ತೆರೆಯಲು ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಬೃಹತ್ ಧಾರ್ಮಿಕ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಶಾಲಾ ಕಾಲೇಜುಗಳು, ಮಾಲ್‌ಗಳು, ಚಿತ್ರಮಂದಿರಗಳನ್ನು ಸದ್ಯಕ್ಕೆ ತೆರೆಯುವಂತಿಲ್ಲ. ಜಿಮ್‌ಗಳನ್ನು ತೆರೆಯುವುದು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರ ಎಂದು ಕೇಂದ್ರ ಸರ್ಕಾರ ಘೋಷಿಸಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ಅಂತಿಮ ತೀರ್ಮಾನ ಇನ್ನೆರಡು ದಿನಗಳಲ್ಲಿಯೇ ಹೊರಬೀಳಲಿದೆ.


ಇದನ್ನೂ ಓದಿ: ಕೊರೋನಾ ವೈರಸ್‌ ಬಿಕ್ಕಟ್ಟು ನಿಜ; ಆದರೆ ದುರಂತವಾಗಬೇಕಾಗಿಲ್ಲ: ಎಸ್ತರ್ ‌ಡಫ್ಲೋ, ಅಭಿಜಿತ್ ಬ್ಯಾನರ್ಜಿ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕೇವಲ ಲಾಕ್ ಡೌನ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...