Homeಕರೋನಾ ತಲ್ಲಣ‍ಶಾಲೆ ಪುನರಾರಂಭದ ಬಗ್ಗೆ ತೀರ್ಮಾನವಾಗಿಲ್ಲ- ಸಚಿವ ಸುರೇಶ್ ಕುಮಾರ್‌

‍ಶಾಲೆ ಪುನರಾರಂಭದ ಬಗ್ಗೆ ತೀರ್ಮಾನವಾಗಿಲ್ಲ- ಸಚಿವ ಸುರೇಶ್ ಕುಮಾರ್‌

ಶಾಲೆಗಳನ್ನು ಆರಂಭಿಸುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿನ ಸ್ಥಿತಿಗತಿಗಳ ಬಗ್ಗೆಯೂ ಅಧ್ಯಯನ ಮಾಡುತ್ತೇವೆ- ಸಚಿವ ಸುರೇಶ್ ಕುಮಾರ್‌

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಚ್ಚಲಾಗಿರುವ ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌‌ ತಿಳಿಸಿದ್ದಾರೆ.

ಶಿಕ್ಷಣ ತಜ್ಞರ ಜೊತೆ ಬುಧವಾರ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಇನ್ನೂ ಶಾಲೆಗಳ ಪುನರಾರಂಭದ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಇನ್ನೂ ಎರಡು ದಿನ ಸಭೆ ನಡೆಸುತ್ತೇವೆ. ಸಮಾಜಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಸಿಬ್ಬಂದಿ ರಾಜ್ಯದ ಎಲ್ಲಾ ತಾಲೂಕಿನ ಎಸ್‌ಡಿಎಂಸಿಗಳ ಜೊತೆಗೆ ಚರ್ಚೆ ಮಾಡಲಿದ್ದೇವೆ ಎಂದರು.

’ಶಾಲೆಗಳನ್ನು ಆರಂಭಿಸುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿನ ಸ್ಥಿತಿಗತಿಗಳ ಬಗ್ಗೆಯೂ ಮೊದಲು ಅಧ್ಯಯನ ಮಾಡುತ್ತೇವೆ. ರಾಜ್ಯದಲ್ಲಿರುವ ವಸತಿ ಶಾಲೆಯವರ ಜೊತೆ ಇಲಾಖೆಯ ಆಯುಕ್ತರು ಚರ್ಚೆ ನಡೆಸಲಿದ್ದಾರೆ’ ಎಂದು ಸಚಿವ ಸುರೇಶ್ ಕುಮಾರ್‌ ತಿಳಿಸಿದರು.

ಶಾಲೆಗಳನ್ನು ಆರಂಭಿಸುವ ಕುರಿತು ನಿನ್ನೆ ರಾಜ್ಯದ ಬಿಇಓ ಹಾಗೂ ಡಿಡಿಪಿಐಗಳ ಜೊತೆಗೆ ಚರ್ಚೆ ನಡೆದಿದೆ. ಶಿಕ್ಷಕರ ಸಂಘಗಳ ಅಧ್ಯಕ್ಷರ ಜೊತೆಗೂ ಚರ್ಚೆ ಮಾಡಿದ್ದೇವೆ. ಮೈಸೂರು ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರಿನ ಖಾಸಗಿ ಶಾಲೆಗಳ ಪ್ರತಿನಿಧಿಗಳು ಕೂಡಾ ಶಾಲೆಗಳನ್ನು ಆರಂಭಿಸುವ ಕುರಿತು ಸಭೆ ನಡೆಸುತ್ತಿದ್ದಾರೆ. ಈ ಎಲ್ಲಾ ಚರ್ಚೆಗಳ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ, ಅವರಿಗೆ ಸ್ಥಿತಿಗಳ ಬಗ್ಗೆ ವಿವರಿಸಿ ಮುಂದಿನ ಕ್ರಮಗಳ ಬಗ್ಗೆ ತಿಳಿಸುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ವೈದ್ಯಕೀಯ ಸೀಟ್‌ನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read