Homeಮುಖಪುಟಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶಾದ್ಯಂತ ಕರೆ ನೀಡಿದ್ದ ಭಾರತ ಬಂದ್‌ ಹಿನ್ನೆಲೆ ರೈತ ಸಂಘಟನೆಗಳು, ರೈತಪರ ಹೋರಾಟಗಾರರು, ವಿರೋಧ ಪಕ್ಷಗಳು ಬೀದಿಗಿಳಿದಿವೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳ ರೈತ ಸಂಘಗಳು  “ಭಾರತ್ ಬಂದ್” ನಲ್ಲಿ ಭಾಗವಹಿಸಿವೆ.

ಪ್ರಮುಖ ರೈತ ಸಂಘಟನೆಗಳಾದ ಅಖಿಲ ಭಾರತ ಕಿಸಾನ್​ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್​ಸಿಸಿ), ಅಖಿಲ ಭಾರತ ಕಿಸಾನ್​ ಮಹಾಸಂಘ್​​(ಎಐಕೆಎಂ) ಮತ್ತು ಭಾರತೀಯ ಕಿಸಾನ್​ ಯೂನಿಯನ್​(ಬಿಕೆಯು) ಕರೆ ನೀಡಿದ್ದ ಪ್ರತಿಭಟನೆಗೆ ಕಾಂಗ್ರೆಸ್, ಡಿಎಂಕೆ, ಎಎಪಿ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಕನಿಷ್ಠ 10 ಕೇಂದ್ರ ಕಾರ್ಮಿಕ ಸಂಘಗಳು ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಮಸೂದೆಗಳನ್ನು ರದ್ದುಗೊಳಿಸದ ಹೊರತು ತಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಕೃಷಿ ಸುಗ್ರೀವಾಜ್ಞೆಗಳನ್ನು ಆರಂಭದಿಂದಲೂ ತೀವ್ರವಾಗಿ ವಿರೋಧಿಸುತ್ತಿರುವ ಪಂಜಾಬ್‌ನ ರೈತ ಸಂಘಟನೆಗಳು ಬೆಳಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿವೆ. ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.

PC:Hindustan Times

ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಆರ್​ಜೆಡಿ ಮುಖಂಡ ತೇಜಸ್ವಿ ಯಾದವ್​ ಟ್ರ್ಯಾಕ್ಟರ್​ ಚಾಲನೆ ಮಾಡುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಹರಿಯಾಣದ ಬಿಜೆಪಿ ನಾಯಕರಾದ ಪಮಿಂದರ್ ಸಿಂಗ್ ಧುಲ್ ಮತ್ತು ರಾಂಪಾಲ್ ಮಜ್ರಾ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಕರೆದಿದ್ದಾರೆ. ಕೇಂದ್ರ ರೈತರ ವಾದವನ್ನು ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಗೆ ಆರ್‌ಎಸ್‌ಎಸ್‌ ನೇತೃತ್ವದ ಎಲ್ಲಾ ರೈತ ಸಂಘಟನೆಗಳು ಬೆಂಬಲ ಸೂಚಿಸಿ, ಪ್ರತಿಭಟನೆಗೆ ಕೈಜೋಡಿಸಿವೆ. ಕರ್ನಾಟಕ ರಾಜ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಲಾಗುತ್ತಿದ್ದು, ರೈತ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸುತ್ತಿವೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ರೈತ, ಕಾರ್ಮಿಕ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಧಿಕ್ಕಾರ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಬೇಡವೇ ಬೇಡ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಒಪ್ಪುವುದಿಲ್ಲ, ಕಾರ್ಪೊರೇಟ್ ಕಂಪನಿಗಳ ಪರ ನಿಂತಿರುವ ಕೇಂದ್ರ ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂಬ ಘೋಷಣೆಗಳು ಕೇಳಿಬಂದವು.

ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ, ರೈತರೇ ಈ ಮಸೂದೆಗಳನ್ನು ವಿರೋಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ವಿರೋಧ ಪಕ್ಷಗಳು ಮಸೂದೆಗಳ ವಿರುದ್ಧ ಸುಳ್ಳು ವದಂತಿ ಹರಡುತ್ತಿವೆ ಎನ್ನುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ರೈತರಿಗೆ ಈ ಕಾಯ್ದೆಗಳ ಮಹತ್ವ ತಿಳಿಸಿ ಎಂದು ಸಲಹೆ ನೀಡುತ್ತಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...