HomeಮುಖಪುಟJNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.

- Advertisement -
- Advertisement -

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಬಂಧಿಸಿರುವ ಪಿಂಜ್ರಾ ತೋಡ್ ಕಾರ್ಯಕರ್ತೆಯಾದ ದೇವಂಗನಾ ಕಾಳಿತಾ ಅವರಿಗೆ ಮಂಗಳವಾರ ದರಿಯಗಂಜ್ ಹಿಂಸಾಚಾರ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.

ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯೊಂದರಲ್ಲಿ ದರಿಯಗಂಜ್‌ನಲ್ಲಿ  2019ರ ಡಿಸೆಂಬರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಬೆಂಬಲಿಸಲು ಪೊಲೀಸರು ಯಾವುದೇ ದೃಢವಾದ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ಹೇಳಿದ್ದಾರೆ.

ಆದರೆ, ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 


ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಮ್ಯಾಜಿಸ್ಟ್ರೇಟ್ ಪಾಂಡೆ ಕಾಳಿತಾಗೆ ಜಾಮೀನು ನೀಡುವಾಗ, “ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳ ಆಧಾರದ ಮೇಲೆ ಎನ್‌ಆರ್‌ಸಿ ಮಸೂದೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು, ಆದರೆ ಇಲ್ಲಿಯವರೆಗೆ ತನಿಖೆಯಲ್ಲಿ ಐಪಿಸಿಯ 325/352 ಸೆಕ್ಷನ್‌ಗಳನ್ನು ಅವರ ಮೇಲೆ ಹೂಡಿರುವುದಕ್ಕೆ ಆರೋಪಿಗಳ ಮೇಲೆ ಯಾವುದೇ ನೇರ ಸಾಕ್ಷ್ಯಗಳು ಕಂಡುಬಂದಿಲ್ಲ ಎಂದಿದ್ದಾರೆ”

ಹಿಂಸಾಚಾರದ ಸ್ಥಳದಲ್ಲಿ ಕಾಳಿತಾ ಇದ್ದರು ಎಂದು ಎಂಎಲ್‌ಸಿ ಆಧಾರದ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ. ಆದರೆ “ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳು ಭಾಗಿಯಾಗಿರುವುದನ್ನು ಅಥವಾ ನಿರ್ದಿಷ್ಟವಾಗಿ ಯಾವುದೇ ಹಿಂಸಾತ್ಮಕ ಚಟುವಟಿಕೆ ನಡೆಸಿರುವುದನ್ನು ತೋರಿಸುತ್ತಿಲ್ಲ” ಎಂದಿದ್ದಾರೆ.

ಕೇವಲ ಎಂಎಲ್‌ಸಿ ಆಧಾರದಲ್ಲಿ ಆರೋಪಿಗಳಿಗೆ ಜಾಮೀನು ನಿರಾಕರಿಸಲು ಸಾಧ್ಯವಾಗುವುದಿಲ್ಲ. ಕಾಳಿತಾ ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನಲ್ಲಿ ಯಾವುದೇ ದೋಷಾರೋಪಣೆ ವಸ್ತುಗಳು ಕಂಡುಬಂದಿಲ್ಲ ಎಂದು ಪಾಂಡೆ ಹೇಳಿದರು.

ಪರಿಸ್ಥಿತಿ ಈಗಿರುವಾಗ ಕಾಳಿತಾ ಯಾವುದೇ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಅಥವಾ ಪ್ರಚೋದಿಸಿದ್ದಾರೆ ಎಂದು ಹೇಳುವುದು ಕಷ್ಟ. ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಉದ್ದೇಶವನ್ನು ಅವರು ಹೊಂದಿರಬಹುದು. ನಂತರ ಅದು ಹಿಂಸಾತ್ಮಕವಾಗಿರಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ತನಿಖೆಯಲ್ಲಿ ಸಹಕರಿಸಲು ಕಾಳಿತಾ ಅವರು ಒಪ್ಪಿದರೆ ಆಕೆಗೆ ಷರತ್ತುಗಳೊಂದಿಗೆ ಜಾಮೀನು ನೀಡಬಹುದು ಎಂದು ಮ್ಯಾಜಿಸ್ಟ್ರೇಟ್ ತಿಳಿಸಿದರು. 30,000 ರೂ. ಜಾಮೀನು ಮತ್ತು ಅವಳ ಪಾಸ್‌ಪೋರ್ಟ್‌ ಜಮಾ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಷರತ್ತುಗಳನ್ನು ವಿಧಿಸಿದ್ದಾರೆ.

ನರ್ವಾಲ್ ಮತ್ತು ಕಾಳಿತಾ ಅವರೊಂದಿಗೆ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಾದ ಸಫೂರಾ ಜರ್ಗರ್, ಮೀರನ್ ಹೈದರ್, ಶಿಫಾ-ಉರ್-ರೆಹಮಾನ್, ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ಹಿಂಸಾಚಾರದಲ್ಲಿ ತಮ್ಮ ಪಾತ್ರದ ಆರೋಪಕ್ಕೆ ಸಂಬಂಧಿಸಿದಂತೆ ಕಠಿಣ ಯುಎಪಿಎ ಆರೋಪಗಳೊಂದಿಗೆ ಬಂಧಿಸಲಾಗಿದೆ.

ಇದನ್ನು ನಾಗರೀಕ ಸಮಾಜವು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವೆಂದು ಕರೆದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿದೆ. ವಿದ್ಯಾರ್ಥಿಗಳ ಬಂಧನಗಳು ಮೋದಿ ಸರ್ಕಾರವು ತನ್ನ ವೈಫಲ್ಯಗಳನ್ನು ಮರೆಮಾಚಲು ವೈವಿಧ್ಯಮಯ ತಂತ್ರಗಳಾಗಿವೆ ಎಂದು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆರೋಪಿ ಪ್ರಜ್ವಲ್ ರೇವಣ್ಣಗೆ ಸಿದ್ದರಾಮಯ್ಯ ಕ್ರಿಮಿನಲ್ ಹಣೆಪಟ್ಟಿ ಕಟ್ಟಿದ್ದಾರೆ: ಕುಮಾರಸ್ವಾಮಿ

0
'ಇನ್ನೂ ಆರೋಪಿಯಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕ್ರಿಮಿನಲ್ ಎಂಬ ಹಣೆಪಟ್ಟಿ ಕಟ್ಟಿದ್ದಾರೆ' ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಲೈಂಗಿಕ ಹಗರಣದ...