Homeಕರೋನಾ ತಲ್ಲಣಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ಮಾಹಿತಿ ಇಲ್ಲದೆ ಇರುವುದರಿಂದ ಪರಿಹಾರ ಒದಗಿಸುವ ಪ್ರಶ್ನೆಯು ಇಲ್ಲ ಎಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿದೆ.

ಈ ಕುರಿತು ಪ್ರಶ್ನೆಯನ್ನು ಸದಸ್ಯರೊಬ್ಬರು ಕೇಳಿದ್ದು, ಲಭ್ಯವಿದ್ದರೆ ವಲಸಿಗರ ರಾಜ್ಯವಾರು ಮಾಹಿತಿಯನ್ನೂ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್

ವಲಸಿಗ ಕಾರ್ಮಿಕರು ಲಾಕ್‌ಡೌನ್ ವೇಳೆ ಎದುರಿಸಬಹುದಾದ ಸಂಕಷ್ಟವನ್ನು ಅಂದಾಜಿಸಲು ಕೇಂದ್ರ ಸರ್ಕಾರ ವಿಫಲವಾಗಿತ್ತೇ ಎಂಬ ಕುರಿತಾದ ಪ್ರಶ್ನಗೆ ಉತ್ತರಿಸಿದ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್, “ಕೊರೊನಾ ಸಮಸ್ಯೆ ಹಾಗೂ ಲಾಕ್‌ಡೌನ್‍‌ನಿಂದಾಗಿ ಎದುರಾದ ಸಂಕಷ್ಟಗಳಿಗೆ ಕೇಂದ್ರ, ರಾಜ್ಯ ಸರಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಸರಕಾರೇತರ ಸಂಘಟನೆಗಳು ಸ್ಪಂದಿಸಿವೆ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...