35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ಕರ್ನಾಟಕದಲ್ಲಿ ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

1
ಶಿಕ್ಷಕರು

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌, ಆರ್ಥಿಕ ಕುಸಿತದ ಕಾರಣಗಳಿಂದಾಗಿ ಸಂಬಳ ನೀಡಲಾಗದ ಕಾರಣಕ್ಕೆ ಕರ್ನಾಟಕದ 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಎಜುಕೇಶನ್ ವರ್ಲ್ಡ್ ವರದಿ ಮಾಡಿದೆ.

ಕೋವಿಡ್ -19 ರ ಪರಿಣಾಮವಾಗಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹೆಚ್ಚಿನ ಪೋಷಕರು ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿಲ್ಲವಾದ್ದರಿಂದ, ಇದು ‍ಅಲ್ಲಿನ ಶಿಕ್ಷಕರ ಕೆಲಸಕ್ಕೆ ಕುತ್ತು ತಂದಿದೆ ಎನ್ನಲಾಗಿದೆ. ಆನ್‌ಲೈನ್‌ ಕ್ಲಾಸುಗಳನ್ನು ನಡೆಸಲು ಉತ್ಸಾದ ತೋರಿಸುತ್ತಿರುವ ಶಾಲಾ ಆಡಳಿತ ಮಂಡಳಿಗಳು ಇದಕ್ಕಾಗಿ ಶಿಕ್ಷಕರನ್ನು ಕೆಲಸದಿಂದ ವಜಾಗೊಳಿಸುತ್ತಿದ್ದಾರೆ.

ಇನ್ನು ಕೆಲವೆಡೆ ಸರ್ಕಾರದ ಆದೇಶದ ಹೊರತಾಗಿಯೂ ಹಲವಾರು ಖಾಸಗಿ ಶಾಲೆಗಳು ಪೋಷಕರಿಂದ ಶುಲ್ಕ ಕಟ್ಟಿಸಿಕೊಳ್ಳುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಪ್ರತಿಕ್ರಿಯಿಸಿ “ಕರ್ನಾಟಕ ಸರ್ಕಾರಕ್ಕೆ ಪರಿಸ್ಥಿತಿಯ ಬಗ್ಗೆ ತಿಳಿದಿದೆ. ಖಾಸಗಿ ಶಾಲೆಗಳು ಶಿಕ್ಷಕರಿಗೆ ಸಂಬಳ ಪಾವತಿಸಲು ಪೋಷಕರಿಂದ ಶುಲ್ಕ ಸಂಗ್ರಹಿಸಲು ಒತ್ತಾಯಿಸುತ್ತಿವೆ. ಆದರೆ ಪೋಷಕರು ಶಿಕ್ಷಣ ಸಂಸ್ಥೆಗಳಿಗೆ ಪಾವತಿಸುವ ಸ್ಥಿತಿಯಲ್ಲಿಲ್ಲ. ನಾವು ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದಿದ್ದಾರೆ.

ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಉದ್ಯೋಗ ಕಳೆದುಕೊಂಡ ಕರ್ನಾಟಕ ಖಾಸಗಿ ಶಾಲಾ ಶಿಕ್ಷಕರ ಬಗ್ಗೆ ಮಾತನಾಡಿ “ರಾಜ್ಯಾದ್ಯಂತ ಖಾಸಗಿ ಶಾಲೆಗಳು 35,000 ಶಿಕ್ಷಕರನ್ನು ವಜಾ ಮಾಡಿದೆ. ಅವರಲ್ಲಿ ಹೆಚ್ಚಿನವರು ನರ್ಸರಿ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು” ಎಂದಿದ್ದಾರೆ.

ತಮಿಳುನಾಡು ಸರ್ಕಾರವು ಖಾಸಗಿ ಶಾಲೆಗಳು ಶುಲ್ಕ ಸಂಗ್ರಹಿಸುವುದನ್ನು ನಿಷೇಧಿಸಿ ಏಪ್ರಿಲ್ 20ರಂದು ಆದೇಶ ಹೊರಡಿಸಿದೆ. ಇದರ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ನಡುವೆ ಮದ್ರಾಸ್ ಹೈಕೋರ್ಟ್ “ಖಾಸಗಿ ಶಿಕ್ಷಣ ಸಂಸ್ಥೆಗಳು ಕನಿಷ್ಠ ಶುಲ್ಕವನ್ನು ಸಂಗ್ರಹಿಸಲು ಸಾಧ್ಯವಾಗದಿದ್ದರೂ ತಮ್ಮ ಸಿಬ್ಬಂದಿಗೆ ಸಂಬಳ ನೀಡಬೇಕೆಂದು ಹೇಗೆ ನಿರೀಕ್ಷಿಸುತ್ತೀರಿ” ಎಂದು ತಮಿಳುನಾಡು ಸರ್ಕಾರಕ್ಕೆ ಪ್ರಶ್ನಿಸಿದೆ. ರಾಜ್ಯದ ಆದೇಶದ ವಿರುದ್ಧ ಸಲ್ಲಿಸಿದ ಮನವಿಗೆ ಸ್ಪಂದಿಸುವಂತೆ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಆರ್ ಮಹಾದೇವನ್, “ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಸಂಬಳ ನೀಡಬೇಕು ಎಂಬುದು ಸರ್ಕಾರದ ನೀತಿ ನಿರ್ಧಾರವಾಗಿದೆ. ಆದರೆ ಕನಿಷ್ಠ ಶುಲ್ಕವನ್ನು ಸಹ ಸಂಗ್ರಹಿಸುವುದನ್ನು ನಿಷೇಧಿಸಿದರೆ, ಅವರು ಸಂಬಳ ಪಾವತಿಸಬೇಕೆಂದು ಸರ್ಕಾರ ಹೇಗೆ ನಿರೀಕ್ಷಿಸಬಹುದು? ವಿಶೇಷವಾಗಿ ಹೆಚ್ಚಿನ ಸಂಸ್ಥೆಗಳು ಆನ್‌ಲೈನ್ ತರಗತಿಗಳನ್ನು ನಡೆಸುತ್ತಿರುವಾಗ ಸಂಬಳ ನೀಡುವುದು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿ ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕೆಯ ವರದಿಯೊಂದನ್ನು ಟ್ವೀಟ್ ಮಾಡಿರುವ ಅವರು, ಕರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

1 COMMENT

LEAVE A REPLY

Please enter your comment!
Please enter your name here