Homeಮುಖಪುಟಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

- Advertisement -
- Advertisement -

ಪಾಲ್ಘರ್‌ ಗುಂಪು ಥಳಿತ ಹತ್ಯೆ ಘಟನೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಹಾಗೂ ಘಟನೆಯೂ ಯಾವುದೇ ಕೋಮು ದೃಷ್ಟಿಯಿಂದ ಆಗಿದ್ದಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟನೆ ನೀಡಿದ್ದಾರೆ.

ಪಾಲ್ಘರ್‌ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಗುಂಪು ಮೂವರನ್ನು ಹತ್ಯೆಗೈದಿದ್ದಕ್ಕೆ ಕೋಮು ಬಣ್ಣ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್ 16 ರಂದು ನಡೆದ ಘಟನೆಯ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಏಪ್ರಿಲ್ 16 ರ ರಾತ್ರಿ ಮುಂಬೈನ ಕಂಡಿವಲಿಯಿಂದ ಮೂವರು ಗುಜರಾತ್‌ನ ಸೂರತ್ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಗದ್ಚಿಂಚಲೆ ಗ್ರಾಮದಲ್ಲಿ ಪೊಲೀಸರು ತಡೆದಿದ್ದರು. ಆಗ ಆ ಮೂವರನ್ನು ಕಳ್ಳರು ಎಂಬ ಭೀತಿಯಿಂದ ಅಲ್ಲಿನ ಜನರು ಸಾಮುಹಿಕವಾಗಿ ಹೊಡೆದು ಕೊಂದಿದ್ದರು.

ಈ ಘಟನೆಯ ಹಿನ್ನೆಲೆಯಲ್ಲಿ ಪಾಲ್ಘರ್ ಪೊಲೀಸರು ಕರ್ತವ್ಯ ನಿರ್ವಹಣೆಯಿಂದ ತಪ್ಪಿಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಮೃತರನ್ನು ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್‌ ಗಿರಿ ಮಹಾರಾಜ್ (35), ಮತ್ತು ಅವರ ಕಾರು ಚಾಲಕ ನಿಲೇಶ್ ತೆಲ್ಗಡೆ (30) ಎಂದು ಗುರುತಿಸಲಾಗಿದೆ. ಅವರು ವಾರಣಾಸಿಯ ಆಶ್ರಮವೊಂದನ್ನು ಸೇರಿದ್ದರು ಎನ್ನಲಾಗಿದೆ.

ಈ ಘಟನೆಯ ನಂತರ ಹಿಂದೂ ಕಾರ್ಯಕರ್ತರ ಹತ್ಯೆ ಎಂದು ಕೋಮು ದೃಷ್ಟಿಕೋನದಡಿ ಈ ವಿಚಾರ ವೈರಲ್‌ ಆಗಿತ್ತು. ರಾಜ್ಯದ ಗೃಹ ಸಚಿವ ಅನಿಲ್ ದೇಶ್ಮುಖ್ ಈ ಘಟನೆಗೆ ಯಾವುದೇ ಕೋಮು ಬಣ್ಣವನ್ನು ನೀಡದಂತೆ ಎಚ್ಚರಿಕೆ ನೀಡಿದ್ದರು, ಏಕೆಂದರೆ ಮೃತ ಮೂವರಲ್ಲಿ ಇಬ್ಬರು ಸನ್ಯಾಸಿಗಳು ಎಂದು ಹೇಳಲಾಗಿದೆ.

ಪಾಲ್ಘರ್‌ ಜನಸಮೂಹ ಹತ್ಯೆ ಘಟನೆಯೂ ಕೋಮು ಆಧಾರಿತವಲ್ಲ ಎಂದು ಸ್ವತಃ ಅಮಿತ್ ಷಾ ಅವರಿಂದ ಸೋಮವಾರ ಕರೆ ಬಂದಿದೆ ಎಂದು ವೀಡಿಯೊ ಸಂದೇಶದಲ್ಲಿ ಠಾಕ್ರೆ ಹೇಳಿದ್ದಾರೆ.

“ಪಾಲ್ಘರ್ ಗುಂಪು ಹತ್ಯೆಯೂ ಕೋಮು ತಿರುವು ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾನು ಅವರನ್ನು ಒತ್ತಾಯಿಸಿದ್ದೇನೆ. ನನ್ನ ಸರ್ಕಾರ ಇಂತಹ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ನಾನು ಕೇಂದ್ರಕ್ಕೆ ಮಾಹಿತಿ ನೀಡಿದ್ದೇನೆ” ಎಂದು ಠಾಕ್ರೆ ಹೇಳಿದ್ದಾರೆ.

ಮೂವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು. “ಪಾಲ್ಘರ್ ಘಟನೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಅಪರಾಧದ ದಿನದಂದು 2 ಸಾಧುಗಳು, 1 ಚಾಲಕ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಲ್ಲ 101 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಠಾಕ್ರೆ ಭಾನುವಾರ ತಡರಾತ್ರಿ ಟ್ವೀಟ್ ಮಾಡಿದ್ದರು.

ಪಾಲ್ಘರ್‌ ಗುಂಪು ಹತ್ಯೆಯಲ್ಲಿ ದಾಳಿ ಮಾಡಿದವರು ಮತ್ತು ಮೃತಪಟ್ಟವರು ಬೇರೆ ಬೇರೆ ಧರ್ಮದವರಲ್ಲ, ಅವರೆಲ್ಲರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂದು ದೇಶಮುಖ್ ಹೇಳಿದ್ದಾರೆ. “ಸಮಾಜದಲ್ಲಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷವನ್ನು ಬಿತ್ತುವವರ ವಿರುದ್ಧವೂ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಪೊಲೀಸರಿಗೆ ಹಾಗೂ ಸೈಬರ್ ಸೆಲ್ ಪೊಲೀಸರಿಗೆ ಆದೇಶಿಸಿದ್ದೇನೆ” ಎಂದು ಅವರು ಭಾನುವಾರ ಟ್ವೀಟ್ ನಲ್ಲಿ ತಿಳಿಸಿದ್ದರು.

ಈ ಘಟನೆಯನ್ನು ಇಟ್ಟುಕೊಂಡು ಸಮಾಜದಲ್ಲಿ ಬಿರುಕು ಸೃಷ್ಟಿಸುತ್ತಿರುವವರ ವಿರುದ್ದ ಪೊಲೀಸರು ನಿಗಾ ಇಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ದೇಶಮುಖ್ ಹೇಳಿದ್ದಾರೆ.


ಇದನ್ನೂ ಓದಿ: ಪಾದರಾಯನಪುರದಲ್ಲಿ ನಡೆದದ್ದೇನು? ಏನು ಕಾರಣ? ಸಂಪೂರ್ಣ ವಿವರಗಳು 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...