Homeಮುಖಪುಟಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಸಾರ್ವಜನಿಕವಾಗಿ ಸುಪ್ರೀಂ ನ್ಯಾಯಮೂರ್ತಿ ಎನ್.ವಿ. ರಮಣ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು

- Advertisement -
- Advertisement -

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜಗನ್, ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಧೀಶರೊಬ್ಬರ ವಿರುದ್ಧ ಹಗರಣವೊಂದ ಆರೋಪ ಹೊರಿಸಿದ್ದಾರೆ ಎಂದು ಆರೋಪಿಲಾಗಿದೆ.

ವಕೀಲರಾದ ಜಿ. ಎಸ್. ಮಣಿ ಹಾಗೂ ಪ್ರದೇಪ್ ಕುಮಾರ್‌ ಯಾದವ್, ಸುಪ್ರೀಂಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಎನ್.ವಿ. ರಮಣ ವಿರುದ್ಧ ಹಗರಣದ ಹೇಳಿಕೆ ನೀಡಿರುವ ಮುಖ್ಯಮಂತ್ರಿಯನ್ನು ಸಾಂವಿಧಾನಿಕ ಹುದ್ದೆಯಿಂದ ಕಿತ್ತುಹಾಕುವಂತೆ ಕೋರಿ ಪಿಐಎಲ್ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ಸುಪ್ರೀಂಗೆ ಸಲ್ಲಿಕೆಯಾಗಿರುವ ಅರ್ಜಿಯಲ್ಲಿ, ಮುಖ್ಯಮಂತ್ರಿಯೂ ಸ್ವಯಂ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹಾಲಿ ನ್ಯಾಯಾಧೀಶರ ವಿರುದ್ಧ ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ತನ್ನ ಸಾಂವಿಧಾನಿಕ ಹುದ್ದೆಯನ್ನು ಬಳಸಿಕೊಂಡು ತಪ್ಪು,ಅಸ್ಪಷ್ಟ, ರಾಜಕೀಯ ಹಾಗೂ ಹಗರಣದ ಹೇಳಿಕೆ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹರೆಂದು ಪರಿಗಣಿಸಬೇಕು ಎಂದು ಆಗ್ರಹಿಸಲಾಗಿದೆ.

ಜಗನ್‌ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾಯಮೂರ್ತಿ ರಮಣ ವಿರುದ್ಧ ಭ್ರಷ್ಟಾಚಾರ ಸಹಿತ ಹಲವು ಆರೋಪಗಳನ್ನು ಹೊರಿಸಿ ಹಾಲಿ ಮುಖ್ಯ ನ್ಯಾಯಾಧೀಶರಾದ ಎಸ್‌.ಎ. ಬೋಬ್ಡೆಗೆ ಪತ್ರ ಬರೆದಿದ್ದರು. ಅಷ್ಟೇ ಅಲ್ಲದೆ ಮರುದಿನ ಪತ್ರಿಕಾಗೋಷ್ಠಿ ನಡೆಸಿ ಸಾರ್ವಜನಿಕವಾಗಿ ನ್ಯಾಯಮೂರ್ತಿ ಎನ್.ವಿ. ರಮಣ ವಿರುದ್ಧ ಆರೋಪಗಳನ್ನು ಮಾಡಿದ್ದರು.

ಇದನ್ನೂ ಓದಿ: ನಿವೃತ್ತಿಯಾದ ನ್ಯಾಯಮೂರ್ತಿ ಅರುಣ್ ಮಿಶ್ರಾರವರ 5 ವಿವಾದಿತ ಪ್ರಕರಣಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...