Homeಮುಖಪುಟಪಂಜಾಬ್ ಸ್ಥಳೀಯ ಚುನಾವಣೆ - ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

- Advertisement -
- Advertisement -

ಪಂಜಾಬ್‌ನ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳುತ್ತಿದೆ. ದೇಶವ್ಯಾಪಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ ನಂತರ ಪಂಜಾಬ್‌ ಇದೆ ಮೊದಲ ಬಾರಿಗೆ ಚುನಾವಣೆ ಎದುರಿಸಿತ್ತು. ಇದುವರೆಗಿನ ಚುನಾವಣಾ ಎಣಿಕೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ ಅನುಭವಿಸಿದ್ದು, ಮತ ಎಣಿಕೆಯಾಗುತ್ತಿರುವ 7 ಮುನ್ಸಿಪಲ್ ಕಾರ್ಪೋರೇಷನ್‌ಗಳಲ್ಲಿ 6 ನ್ನು ಕಾಂಗ್ರೆಸ್ ಗೆದ್ದುಕೊಂಡಿದ್ದು, ಒಂದು ಮುನ್ಸಿಪಲ್‌ ಕಾರ್ಪೋರೇಷನ್‌ನಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.

‌ಫೆಬ್ರವರಿ 14 ರಂದು ರಾಜ್ಯದ 109 ನಗರ ಪಂಚಾಯತ್ ಹಾಗೂ ಮುನ್ಸಿಪಲ್ ಕೌನ್ಸಿಲ್ ಮತ್ತು 8 ಮುನಿಸಿಪಲ್ ಕಾರ್ಪೋರೇಷನ್‌‌‌ಗಳಲ್ಲಿ ಚುನಾವಣೆ ನಡೆದಿತ್ತು, ಅವುಗಳ ಮತ ಎಣಿಕೆ ಪ್ರಗತಿಯಲ್ಲಿದೆ. ಏಳು ಮುನಿಸಿಪಲ್ ಕಾರ್ಪೋರೇಷನ್‌‌‌ಗಳಾದ ಬತಿಂಡಾ, ಅಬೋಹರ್, ಬಟಾಲಾ, ಮೊಗಾ, ಕಪುರ್ಥಾಲಾ, ಹೋಶಿಯಾರ್‌ಪುರ ಮತ್ತು ಪಠಾಣ್‌ಕೋಟ್‌ನ 2252 ವಾರ್ಡ್‌ಗಳಿಗೆ ಮತ ಎಣಿಕೆ ನಡೆಯುತ್ತಿದೆ.

ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಗೆ ಭಾರೀ ಪೊಲೀಸ್ ಭದ್ರತೆ

7 ಮುನ್ಸಿಪಲ್ ಕಾರ್ಪೋರೇಷನ್‌ನಲ್ಲಿ ಕಾಂಗ್ರೆಸ್‌ ಮೊಗಾ, ಹೋಶಿಯಾರ್‌ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್‌ಕೋಟ್ ಮತ್ತು ಬಟಿಂಡಾ ಒಟ್ಟು ಆರನ್ನು ಗೆದ್ದುಕೊಂಡಿದೆ. ಬಟಿಂಡಾ ಮಹಾನಗರವನ್ನು 53 ವರ್ಷಗಳ ನಂತರ ಕಾಂಗ್ರೆಸ್ ಗೆದ್ದುಕೊಂಡಿದೆ.

ಬತಿಂಡಾ ಲೋಕಸಭಾ ಕ್ಷೇತ್ರವನ್ನು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಬಾದಲ್ ಪ್ರತಿನಿಧಿಸುತ್ತಿದ್ದು ಅವರು ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಆದರೆ ಕೇಂದ್ರದ ಮೂರು ಹೊಸ ಕೃಷಿ ಕಾನೂನನ್ನು ವಿರೋಧಿಸಿ ಮೈತ್ರಿಯನ್ನು ತೊರೆದಿದ್ದರು.

ಈ ಚುನಾವಣೆಯನ್ನು ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗುತ್ತಿದೆ. ಒಟ್ಟು 117 ಸ್ಥಳೀಯ ಸಂಸ್ಥೆ ಚುನಾವಣಾ ಸ್ಥಾನಗಳಿಗೆ 9,222 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

0
ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯಾ? ಹೌದು ಈಗೊಂದು ಆರೋಪವನ್ನು ಸ್ಪರ್ಧೆಯ ಆಕಾಂಕ್ಷಿಗಳಾಗಿದ್ದ ಹಲವು ಅಭ್ಯರ್ಥಿಗಳು ಮಾಡಿದ್ದಾರೆ. ವಾರಾಣಾಸಿಯಲ್ಲಿ ಚುನಾವಣಾಧಿಕಾರಿಗಳು ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದ...