Homeಮುಖಪುಟಕುರಿ, ಮೇಕೆಗಳು ಸತ್ತರೆ ಪರಿಹಾರ ನೀಡುವ 'ಅನುಗ್ರಹ' ಯೋಜನೆ ಮರುಜಾರಿಗೊಳಿಸಿ: ಸಿದ್ದರಾಮಯ್ಯ

ಕುರಿ, ಮೇಕೆಗಳು ಸತ್ತರೆ ಪರಿಹಾರ ನೀಡುವ ‘ಅನುಗ್ರಹ’ ಯೋಜನೆ ಮರುಜಾರಿಗೊಳಿಸಿ: ಸಿದ್ದರಾಮಯ್ಯ

- Advertisement -
- Advertisement -

ಕುರಿ, ಮೇಕೆಗಳು ಆಕಸ್ಮಿಕವಾಗಿ ಸಾವಿಗೀಡಾದರೆ ಪರಿಹಾರ ನೀಡುವ ‘ಅನುಗ್ರಹ’ ಯೋಜನೆ ಮರು ಜಾರಿಗೆ ಒತ್ತಾಯಿಸಿ ಇಂದು ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ “ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸಲಾಗುವುದು” ಎಂದಿದ್ದಾರೆ.

ಕುರಿಗಳನ್ನು ಕಾಡಿನಲ್ಲಿ ಮೇಯಿಸಲು ಹಾಗೂ ಅವುಗಳಿಗೆ ಕಾಯಿಲೆ ಕಾಣಿಸಿಕೊಂಡಾಗ ಕಡ್ಡಾಯವಾಗಿ ಚಿಕಿತ್ಸೆ ಮತ್ತು ಔಷಧ ನೀಡಲು ಅವಕಾಶ ಕಲ್ಪಿಸಿದ್ದು ನಮ್ಮ ಸರ್ಕಾರ. ಇದರ ಜೊತೆಗೆ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ರಚನೆಯಾಗಿದ್ದೂ ನಮ್ಮ ಸರ್ಕಾರದ ಅವಧಿಯಲ್ಲಿ. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪರಿಹಾರ ನೀಡುವ ‘ಅನುಗ್ರಹ’ ಯೋಜನೆಯನ್ನು ನಿಲ್ಲಿಸಿರುವುದು ಖಂಡನಾರ್ಹ ಎಂದರು.

ಕುರಿ, ಮೇಕೆ, ದನ ಮತ್ತು ಎಮ್ಮೆಗಳು ಸಾವಿಗೀಡಾದಾಗ ಅದರ ಮಾಲೀಕರಿಗೆ ನೆರವಾಗುವ ದೃಷ್ಟಿಯಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ಅನುಗ್ರಹ ಯೋಜನೆ ಜಾರಿಗೆ ತಂದಿದ್ದೆ. ಆದರೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷದಿಂದ ಯೋಜನೆ ಸ್ಥಗಿತಗೊಳಿಸಿದೆ ಹಾಗೂ ರೂ.30 ಕೋಟಿ ಬಾಕಿಯನ್ನೂ ಪಾವತಿ ಮಾಡಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕುರಿ ಸಾಕಾಣಿಕೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ 500 ಕುರಿಗಳನ್ನು ಸಾಕಣೆ ಮಾಡುತ್ತಿದ್ದಾರೆ. ಕುರಿ ಸಾಕಣೆ ಎಂಬುದು ಬದುಕಿಗೆ ಒಂದು ದಾರಿ. ಒಂದು ಕುರಿಗೆ ಹತ್ತರಿಂದ ಇಪ್ಪತ್ತು ಸಾವಿರ ರೂ.ಗಳ ಬೆಲೆಯಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿಹೋಗುತ್ತದೆ. ಹಾಗಾಗಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು ಹತ್ತು ಸಾವಿರ ರೂ.ಗಳಿಗೆ ಏರಿಕೆ ಮಾಡುತ್ತೇವೆ ಎಂದು ಅವರು ಘೋಷಿಸಿದರು.


ಇದನ್ನೂ ಓದಿ: ಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...