Homeಕರ್ನಾಟಕಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ. ಕೊರೋನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಕಾರಣದಿಂದ ತರಗತಿಗಳು ಆರಂಭವಾಗಿಲ್ಲ. ಅದರ ಬದಲಿಗೆ ಸೆಪ್ಟಂಬರ್ ತಿಂಗಳಿನಿಂದ ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತಿಸುತ್ತಿದೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಇಲ್ಲದ ಪೋಷಕರ ಮಕ್ಕಳಿಗೆ ಅನುಕೂಲವಾಗಲೆಂದು ಟಿವಿಗಳಲ್ಲಿಯೂ ತರಗತಿ ಪ್ರಸಾರ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ ಗದಗ ಜಿಲ್ಲೆಯಲ್ಲಿ ಟಿವಿಯೂ ಇಲ್ಲದ ಕುಟುಂಬವೊಂದು ತಾಳಿ ಮಾರಿ ಟಿವಿ ತಂದ ಘಟನೆ ಮನಕರಗಿಸುವಂತೆ ಮಾಡಿದೆ. ಈ ಕುರಿತು ಮಾಜಿ ಸಿಎಂ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್‌ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಆ ತಾಯಿಯ ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ ಎಂದಿದ್ದಾರೆ.

ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೋನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಆನ್‌ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ತಲೆಕೆಳಗಾಗಿರುವುದು ನಾನಲ್ಲ; ನಿಮ್ಮ ಶಿಕ್ಷಣ ವಿಧಾನ: ಕಲಾವಿದನ ಕಲ್ಪನೆ ವೈರಲ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...