Homeಕರೋನಾ ತಲ್ಲಣಕೊರೊನಾ ವಾರ್ಡ್‌ನಲ್ಲಿಯೂ ವೈದ್ಯನಿಂದ ಲೈಂಗಿಕ ಕಿರುಕುಳ: ದೂರು ದಾಖಲು

ಕೊರೊನಾ ವಾರ್ಡ್‌ನಲ್ಲಿಯೂ ವೈದ್ಯನಿಂದ ಲೈಂಗಿಕ ಕಿರುಕುಳ: ದೂರು ದಾಖಲು

ಈ ಘಟನೆ ಸೋಮವಾರ ನಡೆದಿದ್ದು, ಅದರ ಆಧಾರದ ಮೇಲೆ ಸ್ಥಳೀಯ ಎಕ್ಸ್‌ಪ್ರೆಸ್‌ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು 20 ವರ್ಷದ ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ನೋಯ್ಡಾದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರಿಗೆ ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಅವರನ್ನು ಪ್ರತ್ಯೇಕ ಇಸೊಲೇಷನ್‌ ವಾರ್ಡ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆ ವೈದ್ಯ ಅದೇ‌ ವಾರ್ಡ್‌ಗೆ ದಾಖಲಾಗಿದ್ದ ಮತ್ತೋರ್ವ ಮಹಿಳಾ ಕೊರೋನಾ ರೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಘಟನೆ ನಡೆದಿದ್ದು, 20 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ವೈದ್ಯನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಇಬ್ಬರಿಗೂ ಕೊರೋನಾ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ ಎಂದು ಸಂಬಂಧಪಟ್ಟ ಸ್ಥಳೀಯ ಎಕ್ಸ್‌ಪ್ರೆಸ್‌ ವೇ ಪೊಲೀಸ್ ಠಾಣಾ‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ನೋಯ್ಡಾ ಪೊಲೀಸ್ ಆಯುಕ್ತ ರಣ ವಿಜಯ್‌ ಸಿಂಗ್, “ಆಸ್ಪತ್ರೆಯ ಒಂದು ಭಾಗದಲ್ಲಿ ಕೊರೋನಾ ಸೋಂಕಿಗೆ ಒಳಗಾದ ಪುರುಷ ಮತ್ತು ಮಹಿಳಾ ರೋಗಿಗಳನ್ನು ಒಟ್ಟಿಗೆ ಒಂದೇ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ವಾರ ಸೋಂಕಿಗೆ ತುತ್ತಾಗಿದ್ದ ವೈದ್ಯ ಮತ್ತು ಯುವತಿಯನ್ನು ಇಲ್ಲೇ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಸಂದರ್ಭದಲ್ಲಿ ವೈದ್ಯ ಮಹಿಳಾ ರೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ಕೆಲವು ಖಾಸಗಿ ಆಸ್ಪತ್ರೆಗಳಲ್ಲೂ ಬೇಜವಾಬ್ದಾರಿತನ ಕಂಡುಬರುತ್ತಿದೆ. ರೋಗಿಗಳನ್ನು ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಇರಿಸಲಾಗಿದೆಯೆ? ಎಂದು ಪರೀಕ್ಷಿಸಲು ನಾವು ವೈದ್ಯಕೀಯ ಇಲಾಖೆಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

“ಯುವತಿ ನೀಡಿದ ದೂರಿನ ಮೇರೆಗೆ ವೈದ್ಯನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದೀಗ ಕೊರೋನಾ ಪ್ರೊಟೋಕಾಲ್ ಇರುವುದರಿಂದ ಯಾವುದೇ ಕಾನೂನು ಕ್ರಮ ಜರುಗಿಸುವುದು ಸಾಧ್ಯವಿಲ್ಲ. ಹೀಗಾಗಿ ಆತ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

0
ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ 2019ಕ್ಕೆ ಹೋಲಿಕೆ ಮಾಡಿದರೆ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಕಡಿಮೆ ಪ್ರಾತಿನಿಧ್ಯ ನೀಡಿರುವುದು ಕಂಡು ಬಂದಿದೆ. ಪ್ರಮುಖ ರಾಷ್ಟ್ರೀಯ ಪಕ್ಷ ಬಿಜೆಪಿ ಕೇವಲ ಓರ್ವ ಮುಸ್ಲಿಂ...