Homeಕರ್ನಾಟಕಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ಶೀಘ್ರವೇ ಕಾಂಗ್ರೆಸ್ ತೊರೆಯಲಿದ್ದು, ಅದಕ್ಕಾಗಿ 90 ಜೊತೆ ಬಟ್ಟೆ ಹೊಲಿಸಿಕೊಂಡಿದ್ದಾರೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

’ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕದ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ’ ಎಂದು ಚಾಟಿ ಬೀಸಿದ್ದಾರೆ.

ಮಸ್ಕಿಯ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್, ’ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದ ಸಿದ್ದರಾಮಯ್ಯ ಶೀಘ್ರವೇ ಕಾಂಗ್ರೆಸ್‌ ತೊರೆಯಲಿದ್ದು, ಅದಕ್ಕಾಗಿ 90 ಜೊತೆ ಹೊಸ ಬಟ್ಟೆ ಖರೀಸಿದ್ದಾರೆ ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಶಿವಮೊಗ್ಗ Live|ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್‌ ಪ್ರಾರಂಭ

ನಳಿನ್ ಕುಮಾರ್ ಕಟೀಲ್ ಮಾತಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿ ನಾಯಕರಿಗೆ ದಾನ ಮಾಡಲು ಬಟ್ಟೆ ಖರೀದಿಸಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್‌ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ ಎಂದಿದ್ದಾರೆ.

ಮುಂದುವರಿದು, ’ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ.. ನಾಲಿಗೆ ಕೂಡಾ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತಿಚೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ರಾಜ್ಯದಲ್ಲಿ ರಾಜಕೀಯ ಬದಲಾವಣೆಗೆ ಕಾರಣವಾಗಿತ್ತು. ವಿಪಕ್ಷಗಳು ಆಡಳಿತರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡು ರಾಜೀನಾಮೆ ಸಲ್ಲಿಸುವಂತೆ ಒತ್ತಡ ಹೇರಿದ್ದರು.

ಸಿಡಿ ಪ್ರಕರಣದ ಘಟನೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಟ್ಟೆ ಖರೀದಿ ವಿಚಾರಕ್ಕೆ ವ್ಯಂಗ್ಯವಾಡಿದ ನಳಿನ್ ಕುಮಾರ್ ಕಟೀಲ್ ವಿರುದ್ಧ ಸಿದ್ದರಾಮಯ್ಯ ಇದೇ ವಿಷಯವನ್ನು ಇಟ್ಟುಕೊಂಡು ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ:  ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...