Homeಮುಖಪುಟನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ಸೆಲ್ವಾ ಎನ್ನುವವರು ಟ್ವೀಟ್ ಮಾಡಿ, "ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಕೋಚಿಂಗ್ ತರಗತಿಗಳನ್ನು ತೆಗೆದುಕೊಳ್ಳುವುದಕ್ಕೆ ಶಕ್ತರಾಗಿಲ್ಲ. ಜೊತೆಗೆ, ಅವರು ಸಿಬಿಎಸ್‌ಸಿ ಶಾಲೆಗಳಲ್ಲಿ ಓದುವುದಕ್ಕೂ ಸಾಧ್ಯವಿಲ್ಲ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜೆಇಇ, ನೀಟ್ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಮತ್ತು ಕೆಲವು ವಿದ್ಯಾರ್ಥಿಗಳು ಒತ್ತಡಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆ ದೇಶದಾದ್ಯಂತ ನಡೆಯುತ್ತಿದೆ. ಇದನ್ನು ವಿರೋಧಿಸಿ ಟ್ವಿಟರ್‌ನಲ್ಲಿ #Govt_killed_Neet_students (ಸರ್ಕಾರ Neet ವಿದ್ಯಾರ್ಥಿಗಳನ್ನು ಕೊಂದಿದೆ) ಎಂಬುದು ಟ್ರೆಂಡಿಂಗ್ ಆಗುತ್ತಿದೆ.

ಈ ವರದಿ ಬರೆಯುವ ವೇಳೆಗೆ, #Govt_killed_Neet_students ಹ್ಯಾಶ್‌ಟ್ಯಾಗ್ ಅನ್ನು ಬಳಸಿ ಸುಮಾರು 23 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.

ಅರಿವು ಎನ್ನುವವರು ಟ್ವೀಟ್ ಮಾಡಿ, “98% ರಷ್ಟು ತಮಿಳುನಾಡಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಪಠ್ಯಕ್ರಮವನ್ನು ಅಭ್ಯಸಿಸುತ್ತಿದ್ದಾರೆ. ವರ್ಷಪೂರ್ತಿ ಒಂದು ಪಠ್ಯಕ್ರಮವನ್ನು ಅಧ್ಯಯನ ಮಾಡಿ, ನೀಟ್ ಪರೀಕ್ಷೆಯಲ್ಲಿ ಸಂಪೂರ್ಣ ಬೇರೆಯೇ ಆದ ಪಠ್ಯಕ್ರಮಕ್ಕೆ ಪರೀಕ್ಷೆ ಬರೆಯುವುದು ಅಸಮರ್ಥನೀಯವಾದದ್ದು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಸೆಲ್ವಾ ಎನ್ನುವವರು ಟ್ವೀಟ್ ಮಾಡಿ, “ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಕೋಚಿಂಗ್ ತರಗತಿಗಳನ್ನು ತೆಗೆದುಕೊಳ್ಳುವುದಕ್ಕೆ ಶಕ್ತರಾಗಿಲ್ಲ. ಜೊತೆಗೆ, ಅವರು ಸಿಬಿಎಸ್‌ಸಿ ಶಾಲೆಗಳಲ್ಲಿ ಓದುವುದಕ್ಕೂ ಸಾಧ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇಂದು ಆರಂಭವಾಗಿರುವ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕಿದ್ದ 5 ಜನ ವಿದ್ಯಾರ್ಥಿಗಳು ಕಳೆದೊಂದು ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊರೊನಾ ಮಧ್ಯೆ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ದೆಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದರೂ ಸಹ ಕೇಂದ್ರ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿ, “ಸಾಂಕ್ರಾಮಿಕ ರೋಗದ ಮಧ್ಯೆ ಪ್ರವೇಶ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ” ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಹೇಳಿತ್ತು.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

- Advertisment -

Must Read

ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

0
ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದ್ದು, ಇದನ್ನು ಖಂಡಿಸಿ ಅಮೆರಿಕದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರನ್ನು ಥಳಿಸಿ ಪೊಲೀಸರು ದೌರ್ಜನ್ಯ ನಡೆಸಿರುವ ಬಗ್ಗೆ ಅಲ್‌ಜಝೀರಾ ವರದಿ ಮಾಡಿದೆ. ಗಾಝಾದಲ್ಲಿ...