Homeಮುಖಪುಟನಾಳೆ ಸುಪ್ರೀಂನಲ್ಲಿ ಅರ್ನಾಬ್ ಅರ್ಜಿ ವಿಚಾರಣೆ: ಗೋಸ್ವಾಮಿಗೆ ಜೈಲೇ ಗತಿಯೋ, ಬೈಲ್ ಸಿಗುತ್ತದೋ?

ನಾಳೆ ಸುಪ್ರೀಂನಲ್ಲಿ ಅರ್ನಾಬ್ ಅರ್ಜಿ ವಿಚಾರಣೆ: ಗೋಸ್ವಾಮಿಗೆ ಜೈಲೇ ಗತಿಯೋ, ಬೈಲ್ ಸಿಗುತ್ತದೋ?

- Advertisement -
- Advertisement -

ನವೆಂಬರ್ 11 ರ ಬುಧವಾರ ಬಾಂಬೆ ಹೈಕೋರ್ಟ್ ತನ್ನ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಲು ಭಾರತದ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರ ರಜಾ ಪೀಠವು ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳು ಸಲ್ಲಿಸಿದ ಮನವಿಗೆ ಅಸ್ತು ಎಂದಿದೆ.

ಇದನ್ನೂ ಓದಿ: ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್!

ಸಂವಿಧಾನದ 226 ನೇ ಪರಿಚ್ಚೇದದ ಅಡಿಯಲ್ಲಿ ಅರ್ನಾಬ್‌‌‌ಗೆ ತನ್ನ ಅಧಿಕಾರವನ್ನು ಬಳಸಿಕೊಂಡು ಮಧ್ಯಂತರ ಜಾಮೀನು ನೀಡಲು ಹೈಕೋರ್ಟ್ ನವೆಂಬರ್ 9ರ ಸೋಮವಾರ ನಿರಾಕರಿಸಿ, ಸೆಷನ್ಸ್ ನ್ಯಾಯಾಲಯಕ್ಕೆ ಹೋಗಿ ನಿಯಮಿತ ಜಾಮೀನು ಅರ್ಜಿ ಸಲ್ಲಿಸಬೇಕು ಎಂದು ಹೇಳಿತ್ತು.

ಆದರೆ ಇದನ್ನು ಪ್ರಶ್ನಿಸಿ ಅರ್ನಾಬ್ ಗೋಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ನವೆಂಬರ್ 4 ರಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿತ್ತು.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...