Homeಮುಖಪುಟತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ಉತ್ಸವಗಳು ಮತ್ತು ಮುಂದಿನ ತಿಂಗಳು ದೀಪಾವಳಿ ಹಬ್ಬ ಇರುವುದರಿಂದ ಕಾರ್ಖಾನೆಗಳು ಪಟಾಕಿ ತಯಾರಿಸುವಲ್ಲಿ ನಿರತರಾಗಿದ್ದವು.

- Advertisement -
- Advertisement -

ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್ನಾರ್ಕೋಯಿಲ್ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಏಳು ಮಹಿಳೆಯರು ಸಾವನ್ನಪ್ಪಿದ್ದಾರೆ.

ಕಟ್ಟುಮನ್ನಾರ್ಕೋಯಿಲ್‌ನ ಕುರುಂಗುಡಿ ಗ್ರಾಮದಲ್ಲಿ 10 ಕ್ಕೂ ಹೆಚ್ಚು ಸಣ್ಣ ಪಟಾಕಿ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ಕರ್ಫ್ಯೂ ಕಾರಣದಿಂದಾಗಿ ಮುಚ್ಚಲ್ಪಟ್ಟಿದ್ದ ಪಟಾಕಿ ಕಾರ್ಖಾನೆಗಳು ಸೆಪ್ಟೆಂಬರ್ 1 ರಂದು ಕರ್ಫ್ಯೂ ಸಡಿಲಿಸಿದ ನಂತರ ಮತ್ತೆ ತೆರೆಯಲ್ಪಟ್ಟಿದ್ದವು.

ಇದನ್ನೂ ಓದಿ: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ಉತ್ಸವಗಳು ಮತ್ತು ಮುಂದಿನ ತಿಂಗಳು ದೀಪಾವಳಿ ಹಬ್ಬ ಇರುವುದರಿಂದ ಕಾರ್ಖಾನೆಗಳು ಪಟಾಕಿ ತಯಾರಿಸುವಲ್ಲಿ ನಿರತರಾಗಿದ್ದವು.

ಘಟನೆಯು ಕುರುಂಗುಡಿ ಗ್ರಾಮದ ಚಿನ್ನತುರೈ ಅವರ ಪತ್ನಿ ಗಾಂಧಿಮತಿ ಒಡೆತನದ ಪೊಟ್ಯಾಶ್ ಕಾರ್ಖಾನೆಯಲ್ಲಿ ನಡೆದಿದ್ದು ಮಾಲಕಿ ಸೇರಿದಂತೆ 9 ಮಹಿಳೆಯರು ಇಂದು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಕಾರ್ಖಾನೆಯಲ್ಲಿದ್ದ ಪಟಾಕಿ ಸಿಡಿದಿದ್ದು, ಪರಿಣಾಮವಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಮಾಲಕಿ ಮತ್ತು ಸಿಬ್ಬಂದಿ ಸೇರಿದಂತೆ 5 ಮಹಿಳೆಯರು ಘಟನಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ನಂತರ ಇನ್ನೂ ಇಬ್ಬರು ಮಹಿಳೆಯರು ಮೃತರಾಗಿದ್ದಾರೆ.

ಅಪಘಾತದಲ್ಲಿ 7 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಕಡಲೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಬ್ರಿಟಿಶರ ಎದೆ ನಡುಗಿಸಿದ್ದ ಆ ದಲಿತ ಸೇನಾಧಿಪತಿ ಹೆಣ್ಣಿನ ಹೆಸರು ವೀರಮಂಗೈ ಕುಯಿಲಿ

ಅಲ್ಲದೆ 2 ಜನರನ್ನು ಗಂಭೀರ ಗಾಯಗಳೊಂದಿಗೆ ಚಿದಂಬರಂ ರಾಜ ಮುತ್ಯಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕಾರ್ಖಾನೆ ಕಟ್ಟಡ ಸಂಪೂರ್ಣವಾಗಿ ಕುಸಿದಿದೆ. ಅವಶೇಷಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಇನ್ನೂ ಕೆಲಸ ಮಾಡುತ್ತಿದ್ದಾರೆ.

ಪರಿಹಾರಕ್ಕೆ ಸೂಚನೆ

ಅಪಘಾತದಲ್ಲಿ ಪ್ರಾಣ ಕಳೆದುಕೊಂಡ 7 ಮಹಿಳೆಯರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯವಾದ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತೂತ್ತುಕುಡಿಯ ನರಮೇಧದ ಪಾಠಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...