Homeಮುಖಪುಟತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿ ಸಾವಿಗೀಡಾದರು ಎಂದು ಆರೋಪಿಸಲಾದ ತಂದೆ-ಮಗನ ಜೋಡಿ ಲಾಕಪ್ ಡೆತ್ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಭಾನುವಾರ ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡಿರುವ ಮದ್ರಾಸ್ ಹೈಕೋರ್ಟ್‌ಗೆ ಸರ್ಕಾರದ ತೀರ್ಮಾನವನ್ನು ತಿಳಿಸಲಾಗುವುದು ಮತ್ತು ಪ್ರಕರಣವನ್ನು ಕೇಂದ್ರ ಸಂಸ್ಥೆಗೆ ವರ್ಗಾಯಿಸುವ ಮೊದಲು ಅದರ ಅನುಮೋದನೆಯನ್ನು ಪಡೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಲಾಕ್‌ಡೌನ್ ಉಲ್ಲಂಘಿಸಿದ ಆರೋಪದ ಮೇಲೆ ಪಿ ಜಯರಾಜ್ (59) ಮತ್ತು ಅವರ ಪುತ್ರ ಜೆ ಫೆನಿಕ್ಸ್ (31) ಅವರನ್ನು ಜೂನ್ 19 ರಂದು ಬಂಧಿಸಿ ಅವರನ್ನು ಕೋವಿಲ್ಪಟ್ಟಿ ಉಪ ಜೈಲಿಗೆ ಸ್ಥಳಾಂತರಿಸಲಾಗಿತ್ತು.

ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ಅವರು ಮೊಬೈಲ್ ಅಂಗಡಿಯ ಮಾಲೀಕರಾಗಿದ್ದರು.

ಜೂನ್ 22 ರಂದು, ಫೆನಿಕ್ಸ್ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದಕ್ಕೆ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 9 ರ ಸುಮಾರಿಗೆ ನಿಧನರಾದರು. ಮರುದಿನ ಬೆಳಿಗ್ಗೆ, ಫೆನಿಕ್ಸ್ ತಂದೆ ಜಯರಾಜ್ ಕೂಡಾ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟರು, ಅವರು ಕೂಡಾ ಅಲ್ಲಿ ಅವರು ನಿಧನರಾದರು ಎಂದು ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ.

ಆದರೆ ಅವರ ಸಂಬಂಧಿಕರು ಅವರನ್ನು ಸಾಥಂಕುಲಂ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಥಳಿಸಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

“ಇದು ಡಬಲ್ ಕೊಲೆ! ನನ್ನ ತಂದೆ ಮತ್ತು ಸಹೋದರನನ್ನು ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲಾಯಿತು. ನಾನು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ” ಮೃತ ಮೊಬೈಲ್ ಅಂಗಡಿ ಮಾಲೀಕರ ಮಗಳು ಪರ್ಸಿ ಆರೋಪಿಸಿದ್ದಾರೆ.

ಈ ಘಟನೆಯು ರಾಜ್ಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದು, ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಡಿಎಂಕೆ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಎಐಎಡಿಎಂಕೆ ಸರ್ಕಾರವನ್ನು ತರಾಟೆಗೆ ಪಡೆದು, ಪೊಲೀಸ್ ಸಿಬ್ಬಂದಿಗೆ “ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು” ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.


 

ಓದಿ: ತಮಿಳುನಾಡು ಲಾಕಪ್‌ ಡೆತ್: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...