Homeಮುಖಪುಟಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಸುಶಾಂತ್ ಸಾವಿನ ತನಿಖೆಯನ್ನು ವರದಿ ಮಾಡುವಲ್ಲಿ ಸಂಯಮ ವಹಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ ಮಾಧ್ಯಮಗಳಿಗೆ ನಿರ್ದೇಶನ ನೀಡಿತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳ ವರದಿಗಳು ಕೇವಲ ಊಹೆಯಾಗಿದ್ದು, ಅವು ಸತ್ಯವನ್ನು ಆಧರಿಸಿಲ್ಲ ಎಂದು ಸಿಬಿಐ ಹೇಳಿದೆ. ಸುಶಾಂತ್ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ವಹಿಸಿಕೊಂಡ ನಂತರದ ಅದರ ತನಿಖೆ ಕುರಿತಂತ ಮೊದಲ ಹೇಳಿಕೆ ಇದಾಗಿದೆ.

“ಸಿಬಿಐ ವ್ಯವಸ್ಥಿತ ಮತ್ತು ವೃತ್ತಿಪರವಾಗಿ ತನಿಖೆ ನಡೆಸುತ್ತಿದೆ. ಇದರ ಕುರಿತಂತೆ ಮಾಧ್ಯಮಗಳು ಮಾಡುತ್ತಿರುವ ವರದಿಗಳು ಕೇವಲ ಊಹೆಯಾಗಿದೆ. ಸಿಬಿಐ ನಿಯಮದಂತೆ, ಪ್ರಕರಣದ ಪ್ರಸ್ತುತ ತನಿಖೆ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಲಾಗುವುದಿಲ್ಲ” ಎಂದು ಆಯೋಗದ ವಕ್ತಾರರು ತಿಳಿಸಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

“ನಮ್ಮ ತಂಡದ ಸದಸ್ಯರು ತನಿಖೆಯ ಯಾವುದೇ ವಿವರಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿಲ್ಲ. ಹಾಗಾಗಿ ತನಿಖೆಯ ಕುರಿತು ವರದಿ ಮಾಡಲಾದ ಮತ್ತು ಆರೋಪಿಸಲಾದ ವಿವರಗಳು ವಿಶ್ವಾಸಾರ್ಹವಲ್ಲ” ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ಸುಶಾಂತ್, ಮುಂಬೈನ ಅವರದೇ ಅಪಾರ್ಟ್ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿತ್ತು.

ಒಂದು ತಿಂಗಳ ನಂತರ, ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಅವರು, ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ತನ್ನ ಮಗನನ್ನು ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಹಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಮುಂಬೈ ಪೊಲೀಸರು ‘ಆಕಸ್ಮಿಕ ಸಾವು’ ಮಾತ್ರ ಎಂದು ವರದಿ ದಾಖಲಿಸಿದ್ದರಿಂದ, ಅದು ಸೀಮಿತ ತನಿಖಾ ವ್ಯಾಪ್ತಿಯನ್ನು ಹೊಂದಿದೆ. ಆದರೆ, ಬಿಹಾರ ಪೊಲೀಸರು “ಪೂರ್ಣ ಪ್ರಮಾಣದ ಎಫ್ಐಆರ್” ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಈಗ ರಜಪೂತ ತಂದೆ ಕೆ.ಕೆ.ಸಿಂಗ್ ಅವರ ದೂರಿನ ಮೇರೆಗೆ ದಾಖಲಾಗಿರುವ ಪ್ರಕರಣವನ್ನು ಸಿಬಿಐ ಪರಿಶೀಲಿಸುತ್ತಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯವೂ ನಟನ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

ಸುಶಾಂತ್ ಸಾವಿನ ತನಿಖೆಯನ್ನು ವರದಿ ಮಾಡುವಲ್ಲಿ ಸಂಯಮ ವಹಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ ಮಾಧ್ಯಮಗಳಿಗೆ ನಿರ್ದೇಶನ ನೀಡಿತು.

ಹಲವಾರು ಟಿವಿ ಸುದ್ದಿ ವಾಹಿನಿಗಳು ನಟ ರಿಯಾ ಚಕ್ರವರ್ತಿಯನ್ನು ಗುರಿಯಾಗಿಸಿಕೊಂಡಿದೆ. ಪ್ರಸ್ತುತ ಸುಶಾಂತ್ ಸಾವಿನಲ್ಲಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿ. ಆದರೆ ರಿಯಾ ಚಕ್ರವರ್ತಿ “ಸುಶಾಂತ್ ಕುಟುಂಬವು ಅವನನ್ನು ಮಾದಕ ದ್ರವ್ಯ ಸೇವಿಸುವಂತೆ ಮಾಡಿ ಆತ್ಮಹತ್ಯೆಗೆ ದೂಡಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರ, ನೆಟ್ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, “ಮಾಧ್ಯಮಗಳೂ ಸಹ ಚಕ್ರವರ್ತಿಯನ್ನು ಗುರಿಯಾಗಿಸಿಕೊಂಡಿದೆ” ಎಂದು ಟೀಕಿಸಿ, ತನಿಖಾ ಅಧಿಕಾರಿಗಳಿಗೆ ತಮ್ಮ ಕೆಲಸವನ್ನು ನ್ಯಾಯಯುತವಾಗಿ ಮಾಡಲು ಅವಕಾಶ ನೀಡಬೇಕು ಎಂದು ಹೇಳಿತ್ತು.

ಕಳೆದ ವಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮಾಧ್ಯಮ ಸಂಸ್ಥೆಗಳಿಗೆ “ಪತ್ರಿಕೋದ್ಯಮ ಮಾನದಂಡಗಳನ್ನು ಅನುಸರಿಸಲು, ಸೂಕ್ಷ್ಮತೆಯ ವಿಷಯಗಳ ವರದಿಯಿಂದ ದೂರವಿರಲು ಮತ್ತು ಈ ಪ್ರಕರಣದಲ್ಲಿ ವಿಚಾರಣೆ ನಡೆಸದಂತೆ” ಸಲಹೆ ನೀಡಿತ್ತು.


ಇದನ್ನೂ ಓದಿ: ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...