Homeಮುಖಪುಟಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ಆಗಸ್ಟ್ 5 ರಿಂದ ಪ್ರಾರಂಭವಾಗಲಿರುವ ಅಯೋಧ್ಯ ಭೂಮಿ ಪೂಜೆಯ ಬಗ್ಗೆ ನರೇಂದ್ರ ಮೋದಿ ಸರ್ಕಾರ ಟೀಕೆಗಳನ್ನು ಎದುರಿಸುತ್ತಲೇ ಇದೆ.

- Advertisement -
- Advertisement -

ಆಗಸ್ಟ್ 5 ರಿಂದ ಪ್ರಾರಂಭವಾಗಲಿರುವ ಅಯೋಧ್ಯ ಭೂಮಿ ಪೂಜೆಯ ಬಗ್ಗೆ ನರೇಂದ್ರ ಮೋದಿ ಸರ್ಕಾರ ಟೀಕೆಗಳನ್ನು ಎದುರಿಸುತ್ತಲೇ ಇದೆ. ಈ ನಡುವೆಯೇ ಜಾಗತಿಕ ಸಾಂಕ್ರಾಮಿಕ ಸಂದರ್ಭದಲ್ಲಿ ರಾಮ ಮಂದಿರದತ್ತ ಗಮನ ಹರಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯನ್ನು ಥಳಿಸಲಾಯಿತು ಎಂದು ವರದಿಯಾಗಿದೆ.

ಎಸ್‌ಎಫ್‌ಐ ಬೆಂಬಲಿಗರಾದ ಅಮೃತ್ ಆರ್ಯ ಅವರನ್ನು ಥಳಿಸಲಾಯಿತು ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಸಾವಿರಾರು ಜನರು ಕೊರೊನಾದಿಂದ ಸಾಯುತ್ತಿರುವಾಗ ಸಮಾರಂಭವನ್ನು ನಡೆಸುವುದು ಸೂಕ್ತವೇ ಎಂದು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು.

ಕೂಚ್ ಬೆಹಾರ್‌ನ ತುಫಂಗಂಜ್ ಪಟ್ಟಣದ ನಿವಾಸಿ, ಅಮೃತ್ ಆರ್ಯ ಕೋಲ್ಕತ್ತಾದ ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಲಾಕ್ ಡೌನ್ ನಿಂದ ಅವರ ತವರಿನಲ್ಲಿದ್ದರು.

ಈ ಕುರಿತು ತನ್ನ ಪೋಸ್ಟ್‌ ಡಿಲೀಟ್‌ ಮಾಡಿ, ಕ್ಷಮೆಯಾಚಿಸಬೇಕೆಂದು ಬಿಜೆಪಿ ಬೆಂಬಲಿಗರು ಒತ್ತಾಯಿಸಿದರು ಎಂದು ಅಮೃತ್ ಆರ್ಯ ತಿಳಿಸಿದ್ದಾರೆ.

ಈ ಹಲ್ಲೆಯನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ತುಫಂಗಂಜ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ರಾಮ ಜನ್ಮಭೂಮಿ ಕಟ್ಟಡದ ಅರ್ಚಕ ಪ್ರದೀಪ್ ದಾಸ್ ಮತ್ತು 14 ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ದೃಢಪಟ್ಟಿದೆ. ದೇಶವು ಹೆಚ್ಚಿನ ಕೊರೊನಾ ಪ್ರಕರಣಗಳು ಮತ್ತು ಸಾವುಗಳನ್ನು ಎದುರಿಸುತ್ತಿರುವಾಗ ಇಂತಹ ಬೃಹತ್ ಮತ್ತು ದುಬಾರಿ ಸಮಾರಂಭ ಬೇಕಿತ್ತೆ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ.

ಗಂಭೀರ ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸುವುದು ಎಲ್ಲರ ಕರ್ತವ್ಯ ಎಂದು ಹಲವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...