Homeಕರೋನಾ ತಲ್ಲಣಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಅನೇಕ ಕ್ಷಯ ರೋಗಿಗಳು ಕೊರೊನಾ ಭಯಕ್ಕೆ ಮನೆಯಲ್ಲೇ ಉಳಿಯುತ್ತಿದ್ದಾರೆ. ಇದರಿಂದ ಮನೆಯ ಉಳಿದ ಸದಸ್ಯರಿಗೂ ಕಾಯಿಲೆ ಹರಡುತ್ತದೆ. ಹೀಗಾಗಿ ಕೊರೊನಾ ರೋಗಲಕ್ಷಣ ಇರುವ ಎಲ್ಲರಿಗೂ ಕ್ಷಯರೋಗ ಪರೀಕ್ಷೆಯೂ ಕಡ್ಡಾಯ.

- Advertisement -
- Advertisement -

ಇನ್ಮುಂದೆ ಕೊರೊನಾ ಪತ್ತೆ ಪರೀಕ್ಷೆ ಜೊತೆಗೆ ಕ್ಷಯರೋಗ ಪತ್ತೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕೊರೊನಾ ಮತ್ತು ಕ್ಷಯ ರೋಗ ಈ ಎರಡೂ ಕಾಯಿಲೆಗಳು ಶ್ವಾಸಕೋಶದ ಮೇಲೆ ದಾಳಿ ನಡೆಸುವಂತಹದ್ದು. ಇವೆರೆಡರ ರೋಗ ಲಕ್ಷಣಗಳಲ್ಲೂ ಸಾಮ್ಯತೆಯಿರುವ ಕಾರಣ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕ್ಷಯ ರೋಗಿಗಳ ಪತ್ತೆಯಲ್ಲಿ ಶೇ.36ರಷ್ಟು ಕುಸಿತವಾಗಿದೆ. ಕ್ಷಯ ರೋಗ ಪತ್ತೆ ಕಡಿಮೆಯಾಗಿರುವುದರಿಂದ ಈ ಕಾಯಿಲೆಯಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಬಹುದು ಹಾಗೂ ಕ್ಷಯ ರೋಗ ಹರಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರೋಗ ಪತ್ತೆಗೆ ಸರ್ಕಾರ ಮುಂದಾಗಿದೆ.

ಅನೇಕ ಕ್ಷಯ ರೋಗಿಗಳು ಕೊರೊನಾ ಭಯಕ್ಕೆ ಮನೆಯಲ್ಲೇ ಉಳಿಯುತ್ತಿದ್ದಾರೆ. ಇದರಿಂದ ಮನೆಯ ಉಳಿದ ಸದಸ್ಯರಿಗೂ ಕಾಯಿಲೆ ಹರಡುತ್ತದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸಂಬಂಧಿತ ರೋಗಲಕ್ಷಣ ಇರುವ ಎಲ್ಲರಿಗೂ ಟಿಬಿ ಸೋಂಕಿನ ಪರೀಕ್ಷೆಯೂ ಕಡ್ಡಾಯವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ’ದಿ ಪಾಲಿಟಿಕ್’ ಕನ್ನಡ ವೆಬ್ ಜರ್ನಲ್ ಸೆ. 28 ಕ್ಕೆ ಲೋಕಾರ್ಪಣೆ

ಎಲ್ಲಾ ಕೊರೊನಾ ರೋಗಿಗಳನ್ನು ಕ್ಷಯ ರೋಗ ಲಕ್ಷಣಗಳಿಗಾಗಿ ಪರೀಕ್ಷೆ ನಡೆಸಬೇಕು ಮತ್ತು ಎಲ್ಲ ಕ್ಷಯ ರೋಗಿಗಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಮತ್ತು ಹತ್ತು ದಿನಗಳನ್ನು ಮೀರಿ ಇನ್‌ಫ್ಲುಯೆಂಜಾ ರೀತಿಯ ಕಾಯಿಲೆ (ಐಎಲ್‌ಐ), ತೀವ್ರ ಉಸಿರಾಟದ ತೊಂದರೆ (ಸಾರಿ) ಇದ್ದವರಿಗೆ ಕ್ಷಯ ರೋಗ ಪರೀಕ್ಷೆಗೆ ಒಳಪಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಕ್ಷಯರೋಗ ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ ಅದರ ಸಂಬಂಧಿತ ಚಿಕಿತ್ಸೆ ಮುಂದುವರಿಸಲಾಗುತ್ತದೆ. ಕೊರೊನಾ ಮತ್ತು ಟಿಬಿ ಎರಡೂ ಪಾಸಿಟಿವ್ ಬಂದರೆ ಎರಡಕ್ಕೂ ಒಟ್ಟಿಗೆ ಚಿಕಿತ್ಸೆ ನೀಡಲಾಗುತ್ತದೆ. ಇದು ಸಾವಿನ ಪ್ರಮಾಣ ತಗ್ಗಿಸುವ ಜೊತೆಗೆ ಸೋಂಕಿನ ತೀವ್ರತೆಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಹಕಾರಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...