Homeಮುಖಪುಟಸಿಎಎ ಕುರಿತು ಕೋರ್ಸ್‌ ಆರಂಭಿಸಿದ ಉತ್ತರ ಪ್ರದೇಶದ ವಿಶ್ವವಿದ್ಯಾಲಯ!

ಸಿಎಎ ಕುರಿತು ಕೋರ್ಸ್‌ ಆರಂಭಿಸಿದ ಉತ್ತರ ಪ್ರದೇಶದ ವಿಶ್ವವಿದ್ಯಾಲಯ!

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ರಾಜರ್ಶಿ ಟಂಡನ್ ಓಪನ್ ಯೂನಿವರ್ಸಿಟಿಯು ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಮೂರು ತಿಂಗಳ ಪ್ರಮಾಣಪತ್ರ ಕೋರ್ಸ್ ಅನ್ನು ಪರಿಚಯಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಲು ಕೋರ್ಸ್‌ ಆರಂಭಿಸಲಾಗಿದ್ದು, ಅದಕ್ಕೆ ’ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಕಾರ್ಯಕ್ರಮ (ಎಪಿಸಿಎಎ)’ Awareness Programme in Citizenship Amendment Act (APCAA)’ ಎಂದು ಹೆಸರಿಸಲಾಗಿದೆ.

ವಿಶ್ವವಿದ್ಯಾನಿಲಯದ ಉಪಕುಲಪತಿ ಕಾಮೇಶ್ವರ ನಾಥ್ ಸಿಂಗ್ ಅವರು ಈ ಕುರಿತು ಮಾತನಾಡಿ “ಈ ಜನವರಿಯಲ್ಲಿ ಕೋರ್ಸ್‌ ಪ್ರಾರಂಭವಾಯಿತು. ಈಗಾಗಲೇ ಹಲವಾರು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದು ಸಿಎಎ ಬಗ್ಗೆ ಜಾಗೃತಿ ಮೂಡಿಸಲು ಉದ್ದೇಶಿಸಿದೆ” ಎಂದು ಹೇಳಿದ್ದಾರೆ.

“ಸಿಎಎ ಸಾರ್ವಜನಿಕ ವಿಷಯ ಮತ್ತು ದೇಶದ ಕಾನೂನು. ಜನರಿಗೆ ಅದರ ಬಗ್ಗೆ ಅರಿವು ಮೂಡಿಸಲು ಕೋರ್ಸ್ ಉದ್ದೇಶಿಸಿದೆ. ಕಾಯಿದೆಯ ಅವಶ್ಯಕತೆ, ರಾಷ್ಟ್ರೀಯ ಏಕತೆ ಮತ್ತು ಏಕೀಕರಣದ ಮೇಲೆ ಸಿಎಎ ಪ್ರಭಾವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುವುದು… ಸಿಎಎ ಕುರಿತ ಕೋರ್ಸ್‌ನಲ್ಲಿ ಹಲವಾರು ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಪ್ರಾರಂಭಿಸಿದ್ದಾರೆ ”ಎಂದು ಸಿಂಗ್ ಹೇಳಿದರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...