Homeಕರ್ನಾಟಕವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ

- Advertisement -
- Advertisement -

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮೇ 30 ರೊಳಗೆ ಎಲ್ಲಾ ವಿಷಯವನ್ನು ಆನ್ಲೈನ್ ತರಗತಿ ನಡೆಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ ಎಂದು ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಮೂಲಕ ಮೇ 30 ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ. ಅಲ್ಲದೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ ಎಂದಿರುವ ಕುಮಾರಸ್ವಾಮಿ, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ತರಗತಿ ಪಠ್ಯ ಆಲಿಸುವುದು ಕಷ್ಟ. ಪ್ರತೀ ವಿದ್ಯಾರ್ಥಿಯೂ ಕೂಡ ಆನ್ ಲೈನ್ ಮುಖಾಂತರ ಪರಿಪೂರ್ಣವಾಗಿ ಕಲಿಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಬಹುತೇಕ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳು ಆನ್ ಲೈನ್ ತರಗತಿ ಆರಂಭಿಸಿವೆ. ಇದರಿಂದ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕರೋನಾ ಸಂಕಷ್ಟ ಸಮಯದಲ್ಲಿ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮೇ 11 ರಂದು ಎಲ್ಲ ಪಠ್ಯಕ್ರಮವನ್ನು 31-05-2020 ರೊಳಗೆ ಪೂರ್ಣಗೊಳಿಸುವಂತೆ ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿತ್ತು.


ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

0
ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ 'ಅಲ್ಪಸಂಖ್ಯಾತರು' ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ...