HomeಮುಖಪುಟNEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

"ಹಳೆಯ ದಬ್ಬಾಳಿಕೆಯ ಮನುಸ್ಮೃತಿಯನ್ನು ಎನ್‌ಇಪಿ ಮೂಲಕ ಹೊಸದಾಗಿ ಹೇರಲಾಗುತ್ತಿದೆ" ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

- Advertisement -
- Advertisement -

ನೂತನ ಶಿಕ್ಷಣ ನೀತಿ (NEP) 2020 ರಲ್ಲಿನ ತ್ರಿಭಾಷಾ ಸೂತ್ರವು “ನೋವಿನ ಮತ್ತು ದುಃಖಕರವಾಗಿದೆ” ವಿಷಯವಾಗಿದೆ. ಅದನ್ನು ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಘೋಷಿಸಿದ್ದಾರೆ.

ದಿವಂಗತ ಮುಖ್ಯಮಂತ್ರಿಗಳಾದ ಅನ್ನಾ ದುರೈ, ಎಂಜಿಆರ್ ಮತ್ತು ಜಯಲಲಿತಾ ಅವರು ಹಿಂದಿ ಹೇರಿಕೆಯ ವಿರುದ್ಧವಿದ್ದರು ಎಂಬುದನ್ನು ಉಲ್ಲೇಖಿಸಿರುವ ಅವರು, ತ್ರಿಭಾಷಾ ನೀತಿಯನ್ನು ಮರುಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಎನ್‌ಇಪಿಯಲ್ಲಿನ ತ್ರಿಭಾಷಾ ಸೂತ್ರವು ನೋವಿನ ಮತ್ತು ದುಃಖಕರ ವಿಷಯವಾಗಿದೆ. ಅದನ್ನು ಮರುಪರಿಶೀಲಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡುತ್ತೇನೆ ಎಂದು ಪಳನಿಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

1965 ರಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸಿದಾಗ ತಮಿಳುನಾಡು ವಿದ್ಯಾರ್ಥಿಗಳು ನಡೆಸಿದ ಹಿಂದಿ ವಿರೋಧಿ ಆಂದೋಲನವನ್ನು ಸಚಿವರು ಉಲ್ಲೇಖಿಸಿದ್ದಾರೆ.

ತ್ರಿಭಾಷಾ ನೀತಿಯಲ್ಲಿ ಯಾವ ಭಾಷೆ ಬೋಧಿಸಬೇಕೆಂದು ನಿರ್ಧರಿಸುವ ಅಧಿಕಾರವನ್ನು ರಾಜ್ಯಗಳಿಗೆ  ಬಿಟ್ಟರೂ ಸಹ ಇದನ್ನು ಹಿಂದಿ ಹೇರುವ ಕೇಂದ್ರದ ಮೌನ ಪ್ರಯತ್ನವೆಂದು ತಮಿಳುನಾಡಿನ ರಾಜಕೀಯ ಪಕ್ಷಗಳು ಆರೋಪಿಸಿವೆ.

ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮಿಳು ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರಿಗೆ ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಎನ್‌ಇಪಿ ಅನುಷ್ಠಾನಗೊಳಿಸುವಲ್ಲಿ ಮಾಜಿ ಕೇಂದ್ರ ಸಚಿವರ ಮಾರ್ಗದರ್ಶನಕ್ಕಾಗಿ ಎದುರು ನೋಡುತ್ತಿದ್ದೇನೆ ನಿಶಾಂಕ್ ಪೋಖ್ರಿಯಾಲ್ ಹೇಳಿದ್ದಾರೆ.

ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಮತ್ತು ತಮಿಳುನಾಡಿನ ಅನೇಕ ವಿರೋಧ ಪಕ್ಷಗಳು ಎನ್‌ಇಪಿಯನ್ನು ವಿರೋಧಿಸಿವೆ. ಎನ್‌ಇಪಿ ಮರುಪರಿಶೀಲನೆಗಾಗಿ ಒತ್ತಾಯಿಸಿವೆ.

ಹೊಸ ಶಿಕ್ಷಣ ನೀತಿಯು ಹಿಂದಿ ಮತ್ತು ಸಂಸ್ಕೃತವನ್ನು ಹೇರುವ ಪ್ರಯತ್ನವಾಗಿದೆ ಎಂದು ಡಿಎಂಕೆ ಆರೋಪಿಸಿದೆ. ಸಮಾನ ಮನಸ್ಕ ರಾಜಕೀಯ ಪಕ್ಷಗಳು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೈಜೋಡಿಸುವ ಮೂಲಕ ಅದರ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದೆ.

“ಹಳೆಯ ದಬ್ಬಾಳಿಕೆಯ ಮನುಸ್ಮೃತಿಯನ್ನು ಎನ್‌ಇಪಿ ಮೂಲಕ ಹೊಸದಾಗಿ ಹೇರಲಾಗುತ್ತಿದೆ” ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.


ಇದನ್ನೂ ಓದಿ: ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read