Homeಮುಖಪುಟಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

ಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 22 ರಂದು ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗುವಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶುಕ್ರವಾರ ಸಮನ್ಸ್ ಜಾರಿಗೊಳಿಸಿದೆ.

ಆ ದಿನ ಬೆಳಿಗ್ಗೆ 10 ಗಂಟೆಗೆ ಷಾ “ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗಬೇಕು” ಎಂದು ಬಿಧನ್ನಗರದ ವಿಶೇಷ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ – ಬಿಜೆಪಿಗಿಂತ ಹೆಚ್ಚು ಮತ ಪಡೆದ NOTA

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 500 ರ ಅಡಿಯಲ್ಲಿ ಮಾನಹಾನಿ ಆರೋಪಕ್ಕೆ ಉತ್ತರಿಸಲು ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಷಾ ಅವರ ಹಾಜರಾತಿ ಅಗತ್ಯ ಎಂದು ನ್ಯಾಯಾಧೀಶರು ಒತ್ತಿ ಹೇಳಿದ್ದಾರೆ.

ಘಟನೆಯ ಬಗ್ಗೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯ ವಕೀಲರಾದ ಸಂಜಯ್‌ ಬಸು ಪತ್ರಿಕಾ ಹೇಳಿಕೆ ನೀಡಿದ್ದು, ಗೃಹ ಸಚಿವ ಅಮಿತ್‌ ಶಾ 2018 ರ ಆಗಸ್ಟ್‌ 11 ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಅವರ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: TIME ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read