Homeಕರ್ನಾಟಕಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ. ಹಾಗಾಗಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೆ ಆಗಿರುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿಯ ಬಗ್ಗೆ ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದಾರೆ. ಈಗ ಇದು ವಿವಾದಕ್ಕೆ ಕಾರಣವಾಗಿದೆ.

ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, “ಉಮೇಶ್ ಕತ್ತಿ ಮೊನ್ನೆ ಮಾತನಾಡುತ್ತಾ, ಯಡಿಯೂರಪ್ಪ ಏನ್ ಶಿವಮೊಗ್ಗದ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ ಎಂದು ಪ್ರಶ್ನಿಸಿದ್ದರು. ವಿಜಯಪುರಕ್ಕೆ ಬಿಡುಗಡೆಯಾಗಿದ್ದ 125 ಕೋಟಿ ಹಣವನ್ನು ಹಿಂದಕ್ಕೆ ಪಡೆದಿದ್ದಾರೆ. ಸಿಎಂ ಎಲ್ಲಾ ಅನುದಾನವನ್ನೂ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಇನ್ನೇನು ಬಹಳ ದಿನ ಯಡಿಯೂರಪ್ಪ ಅಧಿಕಾರದಲ್ಲಿ ಉಳಿಯುವುದಿಲ್ಲ. ಅವರದೂ ಬಂದೈತೆ. ಮೇಲಿನವರಿಗೂ ಅವರು ಸಾಕಾಗಿದ್ದಾರೆ. ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ’ಮಿಸ್ಟರ್‌ ಯಡಿಯೂರಪ್ಪ ನೀವು ಪ್ರಜಾಪ್ರಭುತ್ವವಾದಿಯಲ್ಲ, ಸರ್ವಾಧಿಕಾರಿ’!: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ

“ವಿಜಯಪುರಕ್ಕೆ ನೀಡಿದ್ದ ಅನುದಾನ ವಾಪಸ್ ಪಡೆದಿದ್ದರೂ ನಾನು ಬಿಡಲ್ಲ. ಹೇಗೆ ತರಬೇಕೋ ನನಗೆ ಗೊತ್ತು. ಬೆಂಗಳೂರಿನವರು ಬಂದು ವಿಜಯಪುರದ ನಮ್ಮ ಮನೆಯ ಮುಂದೆ ನಿಲ್ಲಬೇಕು. ಈಗ ನಾವು ಅವರ ಮನೆಯ ಮುಂದೆ ಹೋಗಿ ನಿಲ್ಲುತ್ತಿದ್ದೇವೆ. ಉತ್ತರ ಕರ್ನಾಟಕದ ಶಾಸಕರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ, ಚಾಮರಾಜನಗರ ಮತ್ತು ಕೋಲಾರದಲ್ಲಿ ಯಾರಾದರೂ ಬಿಜೆಪಿಗೆ ಓಟ್ ಹಾಕ್ತಾರಾ? ಉತ್ತರ ಕರ್ನಾಟಕದವರೇ 100 ಶಾಸಕರನ್ನು ಆಯ್ಕೆ ಮಾಡಿ ಕಳುಹಿಸುತ್ತಾರೆ. ಆ ಮೇಲೆ ಆ ಕಡೆ 10 ರಿಂದ 15 ಶಾಸಕರು ಆಯ್ಕೆಯಾಗಿರುತ್ತಾರೆ. ಹೀಗಾಗಿ ಮೇಲಿನವರಿಗೂ ಇದು ಗೊತ್ತಾಗಿದೆ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗಿರ್ತಾರೆ. ಪ್ರಧಾನ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ನಂತರ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. ಅದೂ ಕೂಡ ಬಹುತೇಕ ಫೈನಲ್ ಆಗಿದೆ” ಎಂದು ಕುರ್ಚಿಯ ಅನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದಾರೆ.

ಇತ್ತೀಚೆಗೆ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡಂತಿರುವ ಯತ್ನಾಳ್, ಆಗಾಗ ತಮ್ಮ ಆಕ್ರೋಶವನ್ನು ಹೊರಹಾಕುತ್ತಲೇ ಇರುತ್ತಾರೆ. ತಮಗೆ ಸಿಗಬೇಕಿದ್ದ ಸಚಿವ ಸ್ಥಾನವನ್ನು ಬೇರೆಯವರಿಗೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದು, ಈಗ ವಿಜಯಪುರದ ಅನುದಾನವನ್ನು ಹಿಂಪಡೆದಿರುವುದನ್ನು ಕಾರಣ ಮಾಡಿಕೊಂಡು ಈ ರೀತಿ ಹೇಳಿಕೆ ನೀಡಿದ್ದಾರೆ.

ಹಾಗಾಗಿ, ರಾಜ್ಯ ಬಿಜೆಪಿ ಪಾಳಯದಲ್ಲಿ ಬಿರುಕುಂಟಾಗಿದೆ ಎಂಬುದನ್ನು ಸ್ಪಷ್ಟವಾಗಿಯೇ ಹೇಳಿದ್ದಾರೆ. ಈಗಾಗಲೇ ಉಪಚುನಾವಣೆಯ ವಿಷಯದಲ್ಲೂ ಬಿಜೆಪಿಯೊಳಗೆ ಮನಸ್ತಾಪ ಆರಂಭವಾಗಿದ್ದು, ಹಲವು ರಾಜಕೀಯ ವಿಶ್ಲೇಷಕರ ಪ್ರಕಾರ, ಯಡಿಯೂರಪ್ಪನವರನ್ನು ಅತೀ ಶೀಘ್ರದಲ್ಲೇ ಕೆಳಗಿಳಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ – ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...