Homeಮುಖಪುಟಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರೆ, ಸುವೇಂದು ಅಧಿಕಾರಿ ಇತ್ತಿಚೆಗೆ ಬಿಜೆಪಿ ಪಾಳಯಕ್ಕೆ ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಮುಖಂಡರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಲಂಚ ಪಡೆಯುವುದರ ಸ್ಟಿಂಗ್ ಆಪರೇಷನ್‌ ವಿಡಿಯೋಗಳ ಸ್ಕ್ರೀನ್‌ಶಾಟ್‌ಗಳನ್ನು ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರಿಬ್ಬರೂ ಬಿಜೆಪಿ ಸೇರಿರುವುದರಿಂದ ಆ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ನಾಲ್ಕು ವರ್ಷಗಳ ಹಿಂದೆ 2016 ರಲ್ಲಿ ನಾರದ ನ್ಯೂಸ್‌ನ ಸಿಇಒ, ಪತ್ರಕರ್ತ ಮ್ಯಾಥ್ಯೂ ಸ್ಯಾಮುಯೆಲ್ಸ್ ನಡೆಸಿದ ಸ್ಟಿಂಗ್ ಕಾರ್ಯಾಚರಣೆಯ ವಿಡಿಯೋವನ್ನು ಬಿಜೆಪಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿತ್ತು. ಇದರಲ್ಲಿ, ಪತ್ರಕರ್ತ ಸ್ಯಾಮ್ಯುಯೆಲ್ಸ್‌ ತನ್ನನ್ನು ಉದ್ಯಮಿ ಎಂದು ಬಿಂಬಿಸಿಕೊಂಡು, 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಿಗೆ ಹಣವನ್ನು ನೀಡುವುದನ್ನು ಸೆರೆ ಹಿಡಿಯಲಾಗಿತ್ತು.

ಆ 11 ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಲ್ಲಿ ಅಂದಿನ ಟಿಎಂಸಿ ನಾಯಕರಾದ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಕೂಡ ಪ್ರಮುಖರಾಗಿದ್ದರು. ಈ ವಿಡಿಯೋದ ಸ್ಕ್ರೀನ್ ಶಾಟ್‌ಗಳನ್ನು ಯೂಟ್ಯೂಬರ್‌ ಧೃವ್ ರಾಠೀ ಹಂಚಿಕೊಂಡಿದ್ದರು.

ಇದನ್ನೂ ಓದಿ: ಬಂಗಾಳ ಗಲಭೆ: ಬಿಜೆಪಿ ನಾಯಕರ ವಿರುದ್ಧ ಯಾವುದೇ ಬಂಧನ ಬೇಡ ಎಂದ ಸುಪ್ರೀಂ

“4 ವರ್ಷಗಳ ಹಿಂದೆ ಲಂಚ ತೆಗೆದುಕೊಳ್ಳುತ್ತಾ ಸಿಕ್ಕಿಬಿದ್ದ ಈ ಇಬ್ಬರು ರಾಜಕಾರಣಿಗಳ ಕುಟುಕು ಕಾರ್ಯಾಚರಣೆಯನ್ನು ಬಿಜೆಪಿ ಪೋಸ್ಟ್ ಮಾಡಿತ್ತು. ಈಗ ಮುಕುಲ್ ರಾಯ್ ಮತ್ತು ಸುವೇಂದು ಅಧಿಕಾರಿ ಇಬ್ಬರೂ ಸಂತೋಷದಿಂದ ಬಿಜೆಪಿಗೆ ಸೇರಿದ್ದಾರೆ” ಎಂದು ಧೃವ್ ರಾಠೀ ಟ್ವೀಟ್ ಮಾಡಿದ್ದಾರೆ.

ಟಿಎಂಸಿಯ ಪ್ರಬಲ ನಾಯಕ ಎಂದು ಹೆಸರಾಗಿದ್ದ ಸುವೇಂದು ಅಧಿಕಾರಿ, ಬಿಜೆಪಿಗೆ ಸೇರಿದ ಕೆಲ ದಿನಗಳಲ್ಲೇ ಯೂಟ್ಯೂಬರ್ ಧೃವ್ ರಾಠೀ‌  ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಟ್ವೀಟ್, 7,800 ಕ್ಕೂ ಹೆಚ್ಚು ರಿಟ್ವೀಟ್‌ಗಳು ಮತ್ತು 35,000ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ.

ಇದನ್ನೂ ಓದಿ: ಅಮಿತ್ ಶಾ ಭಾಷಣದ ಸುಳ್ಳು ಕಂಡುಹಿಡಿದು ತಿರುಗೇಟು ನೀಡಿದ ಡೆರೆಕ್ ಒಬ್ರಿಯೆನ್

ಆ ಸಮಯದಲ್ಲಿ ಸಂಸದರಾಗಿದ್ದ ಮುಕುಲ್ ರಾಯ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಶ್ಚಿಮ ಬಂಗಾಳದಾದ್ಯಂತ ಬೃಹತ್ ಪ್ರತಿಭಟನೆ ನಡೆಸಿತ್ತು.

ಸದ್ಯ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತಿರುವ ಬಿಜೆಪಿಯು ಟಿಎಂಸಿ ನಾಯಕರುಗಳ ಮೇಲೆ ಕಣ್ಣು ಹಾಕಿದೆ. ಈಗಾಗಲೇ ಟಿಎಂಸಿ ಸೇರಿದಂತೆ ಅನೇಕ ಪಕ್ಷಗಳ 9 ಮಂದಿ ಪ್ರಮುಖ ನಾಯಕರು ಬಿಜೆಪಿ  ಸೇರಿದ್ದಾರೆ. ಅವರಲ್ಲಿ ಟಿಎಂಸಿಯ ಸುವೇಂದು ಅಧಿಕಾರಿಯು ಒಬ್ಬರು. ಟಿಎಂಸಿಯಲ್ಲಿದ್ದ ಮುಕುಲ್ ರಾಯ್ 2017 ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಸದ್ಯ ಬಿಜೆಪಿ ಯೂಟ್ಯೂಬ್ ಚಾನೆಲ್‌ನಿಂದ  ಆ ಸ್ಟಿಂಗ್‌ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

0
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಚನಲ್ ಕಾನ್ಫರೆನ್ಸ್‌ ಪಕ್ಷದ ರೋಡ್ ಶೋ ವೇಳೆ ಅಪರಿಚಿತ ದುಷ್ಕರ್ಮಿಗಳ ಚಾಕು ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ...